ಮಾದಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹೋತ್ಸವ; ಸಪ್ತಪದಿ ತುಳಿದ 48 ಜೋಡಿ

author img

By

Published : Jun 23, 2022, 4:52 PM IST

ಸಾಮೂಹಿಕ ವಿವಾಹ

ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಹೊರ ರಾಜ್ಯದವರೂ ಸೇರಿದಂತೆ ಒಟ್ಟು 48 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಚಾಮರಾಜನಗರ: ಕೊರೊನಾ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಸಾಮೂಹಿಕ ವಿವಾಹವು ಎರಡು ವರ್ಷಗಳ ಬಳಿಕ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ‌ ಅದ್ಧೂರಿಯಾಗಿ ನಡೆಯಿತು.

ಸಾಮೂಹಿಕ ವಿವಾಹ ಕಾರ್ಯಕ್ರಮ

ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ವಿವಾಹೋತ್ಸವದಲ್ಲಿ ಎರಡು ಜೋಡಿ ವಿಶೇಷಚೇತನರು, ಮೂರು ಜೋಡಿ ತಮಿಳುನಾಡು ರಾಜ್ಯದವರು ಸೇರಿದಂತೆ 48 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

1989ರಿಂದಲೂ ಬೆಟ್ಟದಲ್ಲಿ ಸಾಮೂಹಿಕ ವಿವಾಹ‌ ಸಮಾರಂಭ ನಡೆಸಲಾಗುತ್ತಿದೆ. ಇದು 32ನೇ ಸಮಾರಂಭ. ಕೋವಿಡ್ ಕಾರಣಕ್ಕೆ ಎರಡು ವರ್ಷಗಳಿಂದ ಸಾಮೂಹಿಕ ವಿವಾಹ‌ ನಡೆದಿರಲಿಲ್ಲ. 2019ರವರೆಗೆ 1,782 ಜೋಡಿಗಳು ವಿವಾಹ ಬಂಧನಕ್ಕೆ ಒಳಗಾಗಿದ್ದರು.

ಸಾಮೂಹಿಕ ವಿವಾಹ

ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ, ಶಾಸಕ ಆರ್. ನರೇಂದ್ರ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಎಸ್. ಕಾತ್ಯಾಯಿನಿದೇವಿ ನವ ದಂಪತಿಗಳಿಗೆ ಶುಭಹಾರೈಸಿದರು.

ಇದನ್ನೂ ಓದಿ: ಪುತ್ತೂರಿನ ಬಡ ವಿದ್ಯಾರ್ಥಿನಿಗೆ ಸೂರು ಭಾಗ್ಯ ಕಲ್ಪಿಸಿದ ಶಿಕ್ಷಣ ಇಲಾಖೆ.. ಕುಟುಂಬಕ್ಕೆ ಹೊಸಬೆಳಕು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.