ETV Bharat / state

ಆಕ್ಸಿಜನ್ ಕೊರತೆಯಿಂದ ಕೇವಲ ಮೂವರು ಮಾತ್ರ ಸಾವನ್ನಪ್ಪಿದ್ದಾರೆ: ಸಚಿವ ಸುಧಾಕರ್​

author img

By

Published : May 3, 2021, 4:20 PM IST

Dr K Sudhakar
Dr K Sudhakar

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 24 ಕೋವಿಡ್‌ ಸೋಂಕಿತ ರೋಗಿಗಳು ಮೃತಪಟ್ಟಿದ್ದು, ಇದಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಚಾಮರಾಜನಗರ ಜಿಲ್ಲಾ ಕೋವಿಡ್​ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ 24 ರೋಗಿಗಳು ಸಾವನ್ನಪ್ಪಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

ನಿನ್ನೆ ಬೆಳಗ್ಗೆ 7 ಗಂಟೆಯಿಂದ ಮಧ್ಯರಾತ್ರಿವರೆಗೆ 14 ಜನರು ಸಾವನ್ನಪ್ಪಿದ್ದಾರೆ. ಇವರು ಕೋವಿಡ್​ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ 12 ರಿಂದ ಬೆಳಗ್ಗೆ 3ಗಂಟೆವರೆಗೆ 3 ಸಾವನ್ನಪ್ಪಿದ್ದು, ಮುಂಜಾನೆ 3 ರಿಂದ 7ರವರೆಗೆ 7 ಜನ ಸಾವನ್ನಪ್ಪಿದ್ದು, 24 ಗಂಟೆಯಲ್ಲಿ ಒಟ್ಟು 23 ಜನರು ಸಾವಿಗೀಡಾಗಿದ್ದಾರೆ.

  • As per the official statement of doctors, 24 persons died in 24 hours of them only 3 (12am -3am) patients died due to shortage of oxygen. It's initial information by doctors. An investigation is on: Dr K Sudhakar, Karnataka Health Minister (File photo) pic.twitter.com/0Ri3HxU7R4

    — ANI (@ANI) May 3, 2021 " class="align-text-top noRightClick twitterSection" data=" ">

ಇದನ್ನೂ ಓದಿ: ಚಾಮರಾಜನಗರದಲ್ಲಿ ಭೀಕರ ದುರಂತ: 24 ಗಂಟೆ.. 24 ಸಾವು, ಆಕ್ಸಿಜನ್‌ ಸಿಗದೇ 12 ಮಂದಿ ಕೊನೆಯುಸಿರು

ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಆಕ್ಸಿಜನ್​ ಕೊರತೆಯಿಂದ ಮೂವರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ಸುಧಾಕರ್​ ತಿಳಿಸಿದ್ದಾರೆ. ಇಂದು ಸಂಭವಿಸಿರುವ ಘಟನೆ ಬಹಳ ದುಃಖಕರವಾಗಿದ್ದು, ಮೃತರ ಕುಟುಂಬಗಳೊಂದಿಗೆ ರಾಜ್ಯ ಸರ್ಕಾರವಿದೆ. ಘಟನೆಯ ತನಿಖೆಗೆ ಈಗಾಗಲೇ ಸಿಎಂ ಆದೇಶ ನೀಡಿದ್ದಾರೆ ಎಂದಿದ್ದಾರೆ.

ಇದೇ ವೇಳೆ ಮಾತನಾಡಿರುವ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್​, ದುರಂತ ಸಂಭವಿಸಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಘಟನೆ ಬಗ್ಗೆ ತನಿಖೆ ನಡೆಸಿ ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.