ETV Bharat / state

ಪ್ರೀತ್ಸೆ, ಪ್ರೀತ್ಸೆ ಎಂದು ಬೆನ್ನುಬಿದ್ದ ಕಿಡಿಗೇಡಿ ಪ್ರೇಮಿ: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

author img

By ETV Bharat Karnataka Team

Published : Oct 23, 2023, 6:27 PM IST

ಆರೋಪಿ ಯುವಕನ ಮೇಲೆ ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

PU student commits suicide in Chamarajanagara
ಪ್ರೀತಿಸು ಎಂದು ಬೆನ್ನಿಗೆ ಬಿದ್ದ ಪಾಗಲ್ ಪ್ರೇಮಿ: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

ಚಾಮರಾಜನಗರ: ಪ್ರೀತಿಸು ಪ್ರೀತಿಸು ಎಂದು ಕಿಡಿಗೇಡಿ ಪ್ರೇಮಿಯೊಬ್ಬ ಪೀಡಿಸುತ್ತಿದ್ದರಿಂದ ತೀವ್ರವಾಗಿ ಮನನೊಂದು ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊಣಕಣಪುರ ಗ್ರಾಮದಲ್ಲಿ ನಡೆದಿದೆ. ಹೊಣಕಣಪುರ ಗ್ರಾಮದ 16 ವರ್ಷದ ವಿದ್ಯಾರ್ಥಿನಿ ಮೃತಪಟ್ಟವರು. ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಶ್ರೀನಿ ಎಂಬಾತ ವಿದ್ಯಾರ್ಥಿನಿಯನ್ನು ಹಿಂಬಾಲಿಸುವುದು, ಆಕೆಯ ಮೊಬೈಲ್​ಗೆ ಸಂದೇಶ ಕಳುಹಿಸುವುದು, ಪ್ರೀತಿಸು ಎಂದು ಪೀಡಿಸುತ್ತಿದ್ದ ಎಂದು ಮೃತಳ ಪಾಲಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೃತಪಟ್ಟ ಬಾಲಕಿ ನಂಜನಗೂಡಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದರು. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಬೇಗೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಆನೆ ದಂತ ಸಾಗಾಟ ಮಾಡುತ್ತಿದ್ದವರ ಬಂಧನ (ಪ್ರತ್ಯೇಕ ಪ್ರಕರಣ): ಆನೆ ದಂತಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಮೂವರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಭಾನುವಾರ ಬಂಧಿಸಿದ್ದು, ಎರಡು ದಂತ ವಶಪಡಿಸಿಕೊಂಡಿದ್ದಾರೆ. ತಮಿಳುನಾಡಿನ ತಿರುಮೂರ್ತಿ (57) ಶಿವಕುಮಾರ್ (44) ಅಂಥೋಣಿದಾಸ್ (46) ಬಂಧಿತರು.

ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಅಡ್ಡರಸ್ತೆಯಲ್ಲಿ ಆನೆ ದಂತ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿ ದಂತ ಸಾಗಣೆ ಮಾಡುತ್ತಿದ್ದವರನ್ನು ಬಂಧಿಸಿದ್ದಾರೆ. ಸುಮಾರು 9 ಕೆ.ಜಿ 600 ಗ್ರಾಂ ತೂಕದ ಎರಡು ದಂತ ವಶಕ್ಕೆ ಪಡೆದುಕೊಂಡು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಆತ್ಮಹತ್ಯೆ: ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿ ಯಡವನಹಳ್ಳಿ ಗ್ರಾಮದಲ್ಲಿ ನಡೆದಿತ್ತು. ವೈ.ಎಸ್.ಶಿವರಾಜು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶಿವರಾಜು ಅವರ ಸಹೋದರ ಮಹೇಶ್​ ಸಾಮಾಜಿಕ ಬಹಿಷ್ಕಾರ ಹಾಕಿದ್ದರಿಂದ ಮನನೊಂದು ತಮ್ಮ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಬೇಗೂರು ಪೊಲೀಸ್​ ಠಾಣೆಗೆ ದೂರು ನೀಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಯಜಮಾನರಾದ ಕೃಷ್ಣ, ಚಂದು, ರೇವನಾಯಕ, ಸಂತೋಷ್​, ಸಂದೇಶ್​ ಸೇರಿ ಒಟ್ಟು 13 ಮಂದಿ ವಿರುದ್ಧ ಬೇಗೂರು ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ​​ಅದಲ್ಲದೆ ಶಿವರಾಜು ಅವರ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಸಂಬಂಧಿಕರು ಬೇಗೂರು ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಆಗಮಿಸಿದ್ದ ಡಿವೈಎಸ್​ಪಿ ಲಕ್ಷ್ಮಯ್ಯ, ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದಲೇ ವರ್ತೂರು​ ಸಂತೋಷ್​ ಅರೆಸ್ಟ್​​.. ಕಾರಣವೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.