ETV Bharat / state

ಕೊಳ್ಳೇಗಾಲ: ನೆರೆಮನೆಯವನಿಂದ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಗರ್ಭಿಣಿ

author img

By

Published : Oct 29, 2022, 10:14 AM IST

ವ್ಯಕ್ತಿಯೊಬ್ಬ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.

rape-on-minor-girl-in-kollegala
ಕೊಳ್ಳೇಗಾಲ: ನೆರೆಮನೆಯವನಿಂದ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಗರ್ಭಿಣಿ

ಚಾಮರಾಜನಗರ: ನೆರೆಮನೆಯನಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಪೊಲೀಸರು ಆರೋಪಿ ಮರಿಸ್ವಾಮಿ(56) ಎಂಬುವನನ್ನು ಬಂಧಿಸಿದ್ದಾರೆ.

ನೆರೆಮನೆಯಲ್ಲಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯನ್ನು ಈತ ಪುಸಲಾಯಿಸಿ ಅತ್ಯಾಚಾರ ಎಸಗಿದ್ದು, ಬಾಲಕಿಯು ಮನೆಯವರಿಗೆ ಗುರುವಾರ ಮಾಹಿತಿ ತಿಳಿಸಿದ್ದಾಳೆ. ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿದಾಗ ವಿದ್ಯಾರ್ಥಿನಿ 5 ತಿಂಗಳ ಗರ್ಭಿಣಿಯಾಗಿರುವುದು ಖಚಿತವಾಗಿದೆ.

ಬಳಿಕ, ವಿಚಾರ ತಿಳಿದ ಮಕ್ಕಳ ಕಣ್ಗಾವಲು ಘಟಕದ ಅಧಿಕಾರಿಗಳು ಮತ್ತೊಮ್ಮೆ ಪರೀಕ್ಷೆ ನಡೆಸಿ ಖಚಿತ ಪಡಿಸಿಕೊಂಡ ನಂತರ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ: ಬಾಗಲಕೋಟೆ: ಕುಡಿದ ಮತ್ತಿನಲ್ಲಿ ಪತ್ನಿ ಹತ್ಯೆಗೈದ ಪತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.