ETV Bharat / state

ವಿಷ ಪ್ರಸಾದ ದುರಂತ ಪ್ರಕರಣ: ಜಾಮೀನು ಅರ್ಜಿ ಸಲ್ಲಿಸಿದ 2ನೇ ಆರೋಪಿ ಅಂಬಿಕಾ

author img

By

Published : Oct 2, 2021, 2:00 PM IST

ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ನಡೆದ ವಿಷ ಪ್ರಸಾದ ದುರಂತ ಪ್ರಕರಣದ ಎರಡನೇ ಆರೋಪಿ ಅಂಬಿಕಾ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ.

Sulvadi temple tragedy : 2nd accused approached to bail
ವಿಷ ಪ್ರಸಾದ ದುರಂತ ಪ್ರಕರಣ: ಜಾಮೀನು ಅರ್ಜಿ ಸಲ್ಲಿಸಿದ ಎರಡನೇ ಆರೋಪಿ ಅಂಬಿಕಾ

ಚಾಮರಾಜನಗರ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ನಡೆದ ವಿಷ ಪ್ರಸಾದ ದುರಂತ ಪ್ರಕರಣದ ಎರಡನೇ ಆರೋಪಿ ಆಂಬಿಕಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಈಗಾಗಲೇ ಮೊದಲನೇ ಆರೋಪಿ ಇಮ್ಮಡಿ ಸ್ವಾಮಿ ಜಾಮೀನಿಗಾಗಿ ಕದ ತಟ್ಟಿ ಸುಪ್ರೀಂ ಮೆಟ್ಟಿಲೇರಿದ್ದರೂ ಜಾಮೀನು ಸಿಕ್ಕಿರಲಿಲ್ಲ‌. ಈಗ ಕೇಸಿನ ಎರಡನೇ ಆರೋಪಿ ಅಂಬಿಕಾ ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಿನ್ನೆ ಜಾಮೀನಿಗೆ ಅರ್ಜಿ ಸಲ್ಲಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ.

Sulvadi temple tragedy : 2nd accused approached to bail
ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ಸರ್ಕಾರದ ಪರ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲು ಸಮಯವಕಾಶ ಕೋರಿದ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್​​ 29ಕ್ಕೆ ನ್ಯಾಯಾಧೀಶರು ಮುಂದೂಡಿದ್ದಾರೆ.

2019ರ ಡಿಸೆಂಬರ್ 14ರಂದು ನಡೆದಿದ್ದ ಈ ದುರಂತದಲ್ಲಿ 17 ಮಂದಿ ಮೃತಪಟ್ಟು ನೂರಾರು ಮಂದಿ ಅಸ್ವಸ್ಥಗೊಂಡಿದ್ದರು. ವಿಷ ಪ್ರಸಾದ ಸೇವಿಸಿದ ಕೆಲವರು ಈಗಲೂ ಅದರ ಅಡ್ಡ ಪರಿಣಾಮದಿಂದ ನರಳುತ್ತಿರುವುದು ಈ ಕೃತ್ಯದ ಭೀಕರತೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಕ್ರೂರಿ ಕೋವಿಡ್​ಗೆ ಪತಿ ಬಲಿ.. ನೋವಿನಲ್ಲಿ ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.