ಚಾಮರಾಜನಗರದಲ್ಲಿ ಮುಂದಿನ ಎರಡು‌ ದಿನ ಶಾಲೆಗಳಿಗೆ ರಜೆ ಘೋಷಣೆ

author img

By

Published : Aug 4, 2022, 10:21 PM IST

ಚಾಮರಾಜನಗರ

ಚಾಮರಾಜನಗರ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಅಂಗನವಾಡಿಗಳಿಗೆ ಎರಡು ದಿನ ರಜೆ ಘೋಷಿಸಲಾಗಿದೆ.

ಚಾಮರಾಜನಗರ: ಎಡಬಿಡದೆ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲ ಶಾಲೆ ಹಾಗೂ ಅಂಗನವಾಡಿಗಳಿಗೆ ಆ.5 ಮತ್ತು 6 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಚಾರುತಲಾ ಸೋಮಲ್ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಭಾರತೀಯ ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಜಿಲ್ಲಾದ್ಯಂತ ಅತಿ ಹೆಚ್ಚು ಮಳೆ ಬೀಳುವ ಸಂಭವ ಇದೆ ಎಂದು ಹೇಳಿದೆ. ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಜಿಲ್ಲಾದ್ಯಂತ ಇರುವ ಎಲ್ಲಾ ಅಂಗನವಾಡಿ, ಎಲ್.ಕೆ.ಜಿ, ಯು.ಕೆ.ಜಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ‌ ತಿಳಿಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಮಳೆ ಅಬ್ಬರ: ಗ್ರಾಮಗಳ ಸಂಪರ್ಕ ಕಡಿತ, ಹೊಗೆನಕಲ್ ಜಲಪಾತ ಬಳಿ ಮೊಸಳೆ ದರ್ಶನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.