ETV Bharat / state

ಕುಡಿದ ಮತ್ತಿನಲ್ಲಿ ಹೆಂಡತಿ ಕತ್ತು ಹಿಸುಕಿ ಕೊಲೆ ಶಂಕೆ: ಪತಿ ಪರಾರಿ

author img

By

Published : Dec 2, 2020, 8:09 PM IST

ಕುಡಿತದ ಚಟಕ್ಕೆ ಒಳಗಾಗಿದ್ದ ಪತಿರಾಯ ತನ್ನ ಹೆಂಡತಿ ಕೊಂದು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

A man killed his wife in gowri bidanuru
ಕುಡಿದ ಮತ್ತಿನಲ್ಲಿ ಹೆಂಡತಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ

ಗೌರಿಬಿದನೂರು: ಕುಡಿದ ಅಮಲಿನಲ್ಲಿದ್ದ ಪತಿರಾಯ ಹೆಂಡತಿ ಕೊಲೆ ಮಾಡಿ ಪರಾರಿಯಾದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮಲಾಪುರ ಗ್ರಾಮದಲ್ಲಿ ನಡೆದಿದೆ.

ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ
ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ

ಕಳೆದ 5 ವರ್ಷಗಳ ಹಿಂದೆ ಮಮತಾ ಎಂಬ ಯುವತಿಯೊಂದಿಗೆ ಶಿವಕುಮಾರ್ ಮದುವೆಯಾಗಿದ್ದು, ಇಬ್ಬರು ಗಂಡು ಮಕ್ಕಳಿದ್ದಾರೆ. ಯಾವುದೇ ಕೆಲಸಕ್ಕೆ ಹೋಗದ ಶಿವಕುಮಾರ್ ಕುಡಿತ ಚಸಟಕ್ಕೆ ಒಳಗಾಗಿದ್ದು, ವಿನಾಕಾರಣ ಹೆಂಡತಿಯ ಜತೆ ಜಗಳವಾಡುತ್ತಿದ್ದನಂತೆ.

ಕಳೆದ ರಾತ್ರಿ ಇಬ್ಬರ ನಡುವೆ ಜಗಳವಾಗಿದ್ದು, ಎಲ್ಲರೂ ಮಲಗಿದ್ದ ಸಮಯದಲ್ಲಿ ಮಮತಾಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಕೊಲೆ ಮಾಡಿದ್ದಾನೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.