ಗುಡಿಬಂಡೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಛಾವಣಿ ಕುಸಿತ: ಆಶಾ ಕಾರ್ಯಕರ್ತೆಯ ತಲೆಗೆ ಪೆಟ್ಟು

author img

By

Published : Sep 13, 2022, 11:04 PM IST

ಗುಡಿಬಂಡೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ಛಾವಣಿ ಕುಸಿತ

ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ಛಾವಣಿ ಕುಸಿದಿದೆ. ಪರಿಣಾಮ ಅಲ್ಲಿನ ಆಶಾ ಕಾರ್ಯಕರ್ತೆಯ ತಲೆಗೆ ಗಾಯವಾಗಿದೆ.

ಗುಡಿಬಂಡೆ (ಚಿಕ್ಕಬಳ್ಳಾಪುರ): ತಾಲೂಕಿನ ಉಲ್ಲೋಡು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಛಾವಣಿ ಕುಸಿದಿದ್ದು, ಆಶಾ ಕಾರ್ಯಕರ್ತೆ ಸುಮ ಎಂಬುವರಿಗೆ ತಲೆಗೆ ಪೆಟ್ಟಾಗಿದ್ದು, ಅದೃಷ್ಟಾವಶಾತ್ ಮಕ್ಕಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಗುಡಿಬಂಡೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ಛಾವಣಿ ಕುಸಿತ
ಗುಡಿಬಂಡೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ಛಾವಣಿ ಕುಸಿತ

ತಾಲೂಕಿನ ಉಲ್ಲೋಡು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಮಕ್ಕಳಿಗೆ ಚುಚ್ಚುಮದ್ದು ಹಾಕುವ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕಟ್ಟಡದ ಮೇಲ್ಚಾವಣಿ ಕುಸಿದಿದೆ. ಅದರ ಪರಿಣಾಮವಾಗಿ ಅಲ್ಲಿದ್ದ ಆಶಾ ಕಾರ್ಯಕರ್ತೆಯ ತಲೆಯ ಮೇಲೆ ಮೇಲ್ಚಾವಣಿಗೆ ಹಾಕಿದ್ದ ಸಿಮೆಂಟ್ ಬಿದ್ದು ಗಾಯವಾಗಿದೆ. ಇನ್ನು ಗಾಯಗೊಂಡ ಆಶಾ ಕಾರ್ಯಕರ್ತೆಯನ್ನು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಆಶಾ ಕಾರ್ಯಕರ್ತೆ ಸದ್ಯ ಆರೋಗ್ಯವಾಗಿದ್ದು, ಯಾವುದೇ ದುರಂತ ಸಂಭವಿಸಿಲ್ಲ. ಪವಾಡ ಎಂಬಂತೆ ಆಶಾ ಕಾರ್ಯಕರ್ತೆಯ ಜೊತೆಗಿದ್ದ ಮಕ್ಕಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನು ಉಲ್ಲೋಡು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಸುಮಾರು 60 ವರ್ಷಗಳಷ್ಟು ಹಳೆಯದಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಈ ಕೇಂದ್ರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಬಂದು ಚಿಕಿತ್ಸೆ ನೀಡುತ್ತಿದ್ದರು. ಆದರೆ, ಎರಡು ವರ್ಷಗಳಿಂದ ಸಿಬ್ಬಂದಿ ಕೊರತೆ ಎಂಬ ನೆಪದಿಂದ ಯಾರೂ ಈ ಕೇಂದ್ರದಲ್ಲಿ ಇರುತ್ತಿರಲಿಲ್ಲ. ಈ ಹಿಂದೆ ಉಲ್ಲೋಡು ಗ್ರಾಮದಲ್ಲಿ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಶಾಸಕ ಸುಬ್ಬಾರೆಡ್ಡಿ ತಾಲೂಕು ಆರೋಗ್ಯಾಧಿಕಾರಿಗಳ ಮೇಲೆ ಗರಂ ಆದ ಬಳಿಕ ಈ ಕೇಂದ್ರದಲ್ಲಿ ಸಿಬ್ಬಂದಿ ಕೆಲಸ ಮಾಡಲು ಶುರು ಮಾಡಿದರು.

ಕಳೆದ ಒಂದು ವರ್ಷದ ಹಿಂದೆ ಈ ಪ್ರಾಥಮಿಕ ಆರೋಗ್ಯ ಕೇಂದ್ರದ ದುರಸ್ತಿಗಾಗಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಿಂದ ಜಿಲ್ಲಾ ಪಂಚಾಯತಿ ಮೂಲಕ ಮೂರು ಲಕ್ಷ ವೆಚ್ಚ ಮಾಡಲಾಗಿತ್ತು. ಆದರೆ, ಆ ಕಾಮಗಾರಿ ಸಹ ಕಳಪೆಯಿಂದ ಕೂಡಿದ ಕಾರಣಕ್ಕೆ ಮೇಲ್ಚಾವಣಿ ಕುಸಿದಿದೆ ಎಂದು ಸ್ಥಳೀಯರ ಆರೋಪವಾಗಿದೆ.

ಓದಿ: ಕಾರ್ಮಿಕರ ಸಂಘ ಕಟ್ಟಿದ್ದರ ಪರಿಣಾಮ ಕೆಲಸದಿಂದ ಹೊರ ಹಾಕಿದ ಕಾರ್ಖಾನೆ ವಿರುದ್ಧ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.