ETV Bharat / state

ಒಂದೇ ರಸ್ತೆಯಲ್ಲಿ ಪ್ರತ್ಯೇಕ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

author img

By

Published : Feb 12, 2021, 4:27 PM IST

Road accident
ರಸ್ತೆ ಅಪಘಾತ

ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಒಂದೇ ಸಮಯದಲ್ಲಿ ಒಂದೇ ಹೆದ್ದಾರಿಯ ಕೆಲವೇ ಕಿಲೋಮೀಟರ್ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನಲ್ಲಿ ನಡೆದಿದೆ.

ರಸ್ತೆ ಅಪಘಾತದಲ್ಲಿ ಬೈಕ್​ ಸವಾರ ಸಾವು

ದೊಡ್ಡಬಳ್ಳಾಪುರ - ಗೌರಿಬಿದನೂರು ಮಾರ್ಗ ಮಧ್ಯೆ ಇರುವ ಕಲ್ಲಿನಾಯಕನಹಳ್ಳಿ ಗ್ರಾಮದ ಬಳಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಚಿಕ್ಕಹೊಸಳ್ಳಿ ಗ್ರಾಮದ 25 ವರ್ಷದ ಮುತ್ತೇಗೌಡ ತೀವ್ರ ರಕ್ತಸ್ರಾವದಿಂದ ಮೃತಪಟ್ಟರೆ, ಅದೇ ರಸ್ತೆಯ ನಾಚುಕುಂಟೆ ಗ್ರಾಮದ ಬಳಿ ಬೈಕ್​ಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದು ಪಿಯುಸಿ ವಿದ್ಯಾರ್ಥಿ ಆರೂಡಿ ಗ್ರಾಮದ 18 ವರ್ಷದ ಹರ್ಷವರ್ಧನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಎರಡು ಘಟನೆಗಳಿಗೆ ಸಂಬಂಧಿಸಿದಂತೆ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.