ETV Bharat / state

ನಿರ್ಬಂಧಿತ ವಲಯಗಳಿಗೆ ಡಿಸಿ ಭೇಟಿ, ಪರಿಶೀಲನೆ

author img

By

Published : Aug 3, 2020, 2:06 PM IST

ಚಿಂತಾಮಣಿ ನಗರ ಮತ್ತು ಗ್ರಾಮಾಂತರ ಭಾಗದ ಕಂಟೇನ್​​​​ಮೆಂಟ್​​​ ಝೋನ್​​​ಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಅವರು ಭೇಟಿ ನೀಡಿ ಪರಿಶೀಲಿಸಿದರು.

District collector R.Latha visit to Containment Zone
ನಿರ್ಬಂಧಿತ ವಲಯಗಳಿಗೆ ಜಿಲ್ಲಾಧಿಕಾರಿ ಭೇಟಿ

ಚಿಂತಾಮಣಿ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಿಂತಾಮಣಿ ನಗರ ಮತ್ತು ಗ್ರಾಮಾಂತರ ಭಾಗದ ಕಂಟೇನ್​​​​ಮೆಂಟ್​​​ ಝೋನ್​​​ಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಅವರು ಭೇಟಿ ನೀಡಿ ಪರಿಶೀಲಿಸಿದರು.

ನಿರ್ಬಂಧಿತ ವಲಯಗಳಿಗೆ ಜಿಲ್ಲಾಧಿಕಾರಿ ಭೇಟಿ

ನಗರದ ಎನ್​​​.ಆರ್ ​​ಬಡಾವಣೆಯಲ್ಲಿ ಕೊರೊನಾದಿಂದ ಸಾವು ಸಂಭವಿಸಿದ ಬೀದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸ್ಥಳೀಯ ನೋಡಲ್ ಅಧಿಕಾರಿಗಳಿಂದ ವಾರ್ಡ್​​​​​ನ ಸ್ಥಿತಿಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಕೋವಿಡ್​​-19 ಕುರಿತು ಸರಿಯಾದ ಮಾಹಿತಿ ನೀಡದ ಟಾಸ್ಕ್​​​ಫೋರ್ಸ್ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.