ETV Bharat / state

ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; ಇಲ್ಲಿದೆ ಹುದ್ದೆ ವಿವರ

author img

By ETV Bharat Karnataka Team

Published : Jan 6, 2024, 5:04 PM IST

job notification form chikkaballapur district court
job notification form chikkaballapur district court

Job Alert: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 31 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಶೀಘ್ರಲಿಪಿಗಾರ ಗ್ರೇಡ್​ 3, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ, ಆದೇಶ ಜಾರಿಗಾರ, ಚಾಲಕ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಹುದ್ದೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಶೀಘ್ರಲಿಪಿಗಾರ 8, ಟೈಪಿಸ್ಟ್​​ 14, ಟೈಪಿಸ್ಟ್​- ಕಾಪಿಸ್ಟ್​​ 6, ಪ್ರೊಸೆಸ್​ ಸರ್ವರ್​​ 11, ಚಾಲಕ 1, ಜವಾನ 5

ವಿದ್ಯಾರ್ಹತೆ: ಶೀಘ್ರಲಿಪಿಗಾರ, ಟೈಪಿಸ್ಟ್​​, ಟೈಪಿಸ್ಟ್​​-ಕಾಪಿಸ್ಟ್​​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ವ ಪರೀಕ್ಷಾ ಮಂಡಳಿಯಿಂದ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಕಮರ್ಷಿಯಲ್​ ಪ್ರಾಕ್ಟೀಸ್​ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್​ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಪ್ರೌಢ ದರ್ಜೆ ಉತ್ತೀರ್ಣತೆ ಹೊಂದಿರಬೇಕು. ಪ್ರೊಸೆಸ್​​ ಸರ್ವರ್​​​, ಚಾಲಕ ಮತ್ತು ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಪ.ಜಾ, ಪಪಂ, ಪ್ರವರ್ಗ- 1, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 100 ರೂ. ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್​​ ಪಟ್ಟಿ, ಟೈಪಿಂಗ್​ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗೆ ಡಿಸೆಂಬರ್​ 18ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 17 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗಾಗಿ ಅಭ್ಯರ್ಥಿಗಳು chikkaballapur.dcourts.gov.in/judges/online-recruitment/ ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಅಪ್ರೆಂಟಿಸ್​​ ಹುದ್ದೆ; ಜ.11ಕ್ಕೆ ನೇರ ಸಂದರ್ಶನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.