ETV Bharat / state

ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್​ ಸವಾರ ಸಾವು

author img

By

Published : Sep 30, 2019, 10:07 AM IST

ಚಿಕ್ಕಬಳ್ಳಾಪುರ

ಚಿಂತಾಮಣಿ ತಾಲೂಕಿನ ಕುರುಟಹಳ್ಳಿ ಬಳಿ ಕಳೆದ ಎರಡು ದಿನಗಳ ಹಿಂದೆ ಅಪಘಾತಕ್ಕೊಳಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಟಹಳ್ಳಿ ಬಳಿ ಕಳೆದ ಎರಡು ದಿನಗಳ ಹಿಂದೆ ಅಪಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಎರಡು ದಿನಗಳ ಹಿಂದೆ ಅಪಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು

ಎರಡು ದಿನಗಳ ಹಿಂದೆ ಕೋಲಾರದಿಂದ ಚಿಂತಾಮಣಿಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್, ದ್ವಿಚಕ್ರ ವಾಹನದಲ್ಲಿದ್ದ ಟಿಪ್ಪು ನಗರದ ನಿವಾಸಿ ಅಬ್ದುಲ್ ಜಬ್ಬಾರ್ (63) ಎಂಬುವರಿಗೆ ಡಿಕ್ಕಿ ಹೊಡೆದಿತ್ತು. ಇದರಿಂದ ಜಬ್ಬಾರ್​​ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಜಬ್ಬಾರ್​ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Intro:ಚಿಕ್ಕಬಳ್ಳಾಪುರ:- ಚಿಂತಾಮಣಿ ತಾಲ್ಲೂಕಿನ ಕುರುಟಹಳ್ಳಿ ಬಳಿ ಕಳೆದ ಎರಡು ದಿನಗಳ ಹಿಂದೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ಇಂದು ನಡೆದಿದೆ.Body:ಕೋಲಾರದಿಂದ ಚಿಂತಾಮಣಿಗೆ ಬರುತ್ತಿದ್ದ ಸರ್ಕಾರಿ ಬಸ್ ನಗರದ ಟಿಪ್ಪು ನಗರದ ನಿವಾಸಿ ಅಬ್ದುಲ್ ಜಬ್ಬಾರ್(63) ಗೆ ಡಿಕ್ಕಿ ಹೊಡೆದಿದ್ದು ತೀವ್ರವಾಗಿ ಗಾಯಗೊಂಡ ಪರಿಣಾಮ ಕೋಲಾರ ಆಸ್ಪತ್ರೆಗೆ ರವಾನಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯನ್ಹ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.