ETV Bharat / state

ಕುರುಡುಮಲೆ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ, ಬಿಎಸ್​ವೈ ಪ್ರಚಾರ ಆರಂಭಿಸಲಿದ್ದಾರೆ: ಸಂಸದ ಎಸ್.ಮುನಿಸ್ವಾಮಿ

author img

By ETV Bharat Karnataka Team

Published : Sep 15, 2023, 10:58 PM IST

ಮಾಜಿ ಸಿಎಂ ಬಿಎಸ್​ವೈ ಸೇರಿದಂತೆ ಬೊಮ್ಮಾಯಿ ಹಾಗು ತಂಡ ಇದೇ ಸೆಪ್ಟೆಂಬರ್​ 17ರಂದು ಮುಳಬಾಗಿಲು ತಾಲೂಕಿನ ಪ್ರಸಿದ್ಧ ಕುರುಡುಮಲೆ ಶ್ರೀ ಗಣೇಶ ದೇವಸ್ಥಾನದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಸಂಸದ ಎಸ್ ಮುನಿಸ್ವಾಮಿ
ಸಂಸದ ಎಸ್ ಮುನಿಸ್ವಾಮಿ

ಸಂಸದ ಎಸ್.ಮುನಿಸ್ವಾಮಿ ಹೇಳಿಕೆ

ಚಿಕ್ಕಬಳ್ಳಾಪುರ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬೊಮ್ಮಾಯಿ ಅವರ ತಂಡ ಕೋಲಾರ ಜಿಲ್ಲೆಯ ಕುರುಡುಮಲೆ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಕೋಲಾರ ಲೋಕಸಭೆ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಸೆಪ್ಟೆಂಬರ್ 17 ರಂದು ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್​ ಕುಮಾರ್ ಕಟೀಲ್ ಅವರು ಮುಳಬಾಗಿಲು ತಾಲೂಕಿನ ಕುರುಡುಮಲೆ ಶ್ರೀ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ತಾಲೂಕು ಮುಖಂಡರ ಮತ್ತು ಕಾರ್ಯಕರ್ತರ ಜೊತೆ ನಗರದ ಡೆಕ್ಕನ್ ಆಸ್ಪತ್ರೆ ಸಮೀಪವಿರುವ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿ ಚರ್ಚೆ ನಡೆಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಎಸ್.ಮುನಿಸ್ವಾಮಿ, ರೈತ ಹಾಗೂ ಬಡ ವಿರೋಧಿ ಕಾಂಗ್ರೆಸ್ ಸರ್ಕಾರ ಅಲಿ ಬಾಬಾ ಚಾಲೀಸ್ ಚೋರ್ ಎಂಬ ತಂಡ ಮಾಡಿಕೊಂಡು ಹಿಂದುತ್ವದ ಮೇಲೆ ಸನಾತನ ಧರ್ಮದ ವಿರುದ್ಧವಾಗಿ ವೋಟ್ ಬ್ಯಾಂಕಿಗೋಸ್ಕರ ಮಾತನಾಡುತ್ತಿದ್ದಾರೆ. ಇದನ್ನು ವಿರೋಧಿಸಿ ಕಾರ್ಯಕರ್ತರು ಯಾವ ರೀತಿ ಕೆಲಸ ಮಾಡಬೇಕು, ಕರ್ನಾಟಕ ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳು ಗೆಲ್ಲಿಸುವುದರ ಮೂಲಕ ಬಿಜೆಪಿ ಪಕ್ಷದ ಶಕ್ತಿ ಏನು ಎಂದು ತೋರಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವೇಣುಗೋಪಾಲ್ ಶಿಡ್ಲಘಟ್ಟ ರಾಮಚಂದ್ರಗೌಡ, ಮಂಡಲ ಅಧ್ಯಕ್ಷರಾದ ಶಿವಾರೆಡ್ಡಿ , ಮಹೇಶ್, ರಾಜಣ್ಣ, ಕುರಟಲ್ಲಿ ಮಂಜು, ಕುರುಬರು ರಾಜಣ್ಣ, ವೆಂಕಟೇಶ್, ಪ್ರದೀಪ್, ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ಹೈಕಮಾಂಡ್ ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ಧ: ದೇಶದ ಭವಿಷ್ಯಕ್ಕಾಗಿ ಪಕ್ಷದ ಹೈಕಮಾಂಡ್ ಯಾವುದೇ ತೀರ್ಮಾನ ತೆಗೆದುಕೊಂಡರೂ ನಾನು ಅದಕ್ಕೆ ಬದ್ದನಾಗಿದ್ದೇನೆ ಎಂದು ಕೋಲಾರದಲ್ಲಿ ಸಂಸದ ಎಸ್. ಮುನಿಸ್ವಾಮಿ ಹೇಳಿಕೆ (ಸೆಪ್ಟೆಂಬರ್​ 9-2023) ‌ನೀಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ವಿಚಾರ ಹಾಗೂ ಕೋಲಾರ ಲೋಕಸಭಾ ಕ್ಷೇತ್ರ ಜೆಡಿಎಸ್​ಗೆ ಬಿಟ್ಟುಕೊಡುವುದರ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು, ಪ್ರಧಾನಿ ನಾಯಕತ್ವ ಮೆಚ್ಚಿ ಪಕ್ಷಕ್ಕೆ ಬಂದವರಿಗೆ ಸಹಕಾರ ಇದೆ. ಅಲ್ಲದೇ ಗ್ಯಾರಂಟಿಗಳ ಆಧಾರ ಮೇಲೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರವನ್ನ ಜನರು ಛೀಮಾರಿ ಹಾಕುತ್ತಿದ್ದಾರೆ. ಹೀಗಾಗಿ ಇವತ್ತು ಚುನಾವಣೆ ನಡೆದರೂ ಕಾಂಗ್ರೆಸ್​​​ಗೆ ತಕ್ಕ ಪಾಠ ಕಲಿಸುವುದಾಗಿ ಜನ ತೀರ್ಮಾನಿಸಿದ್ದಾರೆ ಎಂದಿದ್ದರು.

ಇದನ್ನೂ ಓದಿ: ಹೈಕಮಾಂಡ್ ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ಧ : ಸಂಸದ ಎಸ್​ ಮುನಿಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.