ETV Bharat / state

ಅಮ್ಮ ನಿನಗೆ ನಾ ಬೇಡವಾದ್ರೆ ಏಕೆ ಹೆತ್ತೆ? ನವಜಾತ ಹೆಣ್ಣುಶಿಶು ಬಿಸಾಡಿ ಹೋದ ನಿರ್ದಯಿಗಳು!

author img

By

Published : Feb 9, 2020, 7:59 PM IST

xassd
ಅಮ್ಮ ನಿನಗೆ ನಾ ಬೇಡವಾದ್ರೆ ಏಕೆ ಹೆತ್ತೆ..!?ನವಜಾತ ಹೆಣ್ಣು ಶಿಶು ಬಿಸಾಡಿ ಹೋಗಿರುವ ನಿರ್ದಯಿಗಳು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದು ದಿನದ ಹೆಣ್ಣು ಮಗುವನ್ನು ಬಟ್ಟೆಯಲ್ಲಿ ಸುತ್ತಿ ಎಸೆದು ಹೋಗಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನ ಸಾದಲಿ ಹೋಬಳಿಯ ಎಸ್. ಗೊಲ್ಲಹಳ್ಳಿ ಹೊರವಲಯದಲ್ಲಿ ಒಂದು ದಿನದ ಹೆಣ್ಣು ನವಜಾತ ಶಿಶು ಪತ್ತೆಯಾಗಿದೆ.

ಒಂದು ದಿನದ ಮಗುವನ್ನು ಪೋಷಕರು ಬಟ್ಟೆಯಲ್ಲಿ ಸುತ್ತಿ ಬಿಸಾಡಿ ಹೋಗಿದ್ದಾರೆ. ಈ ವೇಳೆ ಮಗು ಅಳುತ್ತಿರುವ ಶಬ್ದ ಕೇಳಿ ಸಾರ್ವಜನಿಕರು ಸ್ಥಳೀಯ ಆಶಾ ಕಾರ್ಯಕರ್ತೆಗೆ ಸುದ್ದಿ ಮುಟ್ಟಿಸಿದ್ದಾರೆ. ಈ ವೇಳೆ ಒಂದು ದಿನದ ಹೆಣ್ಣು ಮಗು ಪತ್ತೆಯಾಗಿದ್ದು, ಆಶಾ ಕಾರ್ಯಕರ್ತೆ ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಮಕ್ಕಳ ರಕ್ಷಣಾಧಿಕಾರಿ ಸಿಬ್ಬಂದಿ, ಮತ್ತು ಪೊಲೀಸರ ಸಹಕಾರದಿಂದ ಶಿಶುವನ್ನು ರಕ್ಷಣೆ ಮಾಡಿ, ಸಾದಲಿ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಬಳಿಕ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬುರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.