ETV Bharat / state

ಚಿಕ್ಕಬಳ್ಳಾಪುರ: ರೇಷ್ಮೆ ಕೃಷಿ ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ!

author img

By

Published : Jul 8, 2022, 8:15 PM IST

ಚಿಕ್ಕಬಳ್ಳಾಪುರ ಸರ್ಕಾರಿ ಕೃಷಿ ಮಹಾವಿದ್ಯಾಲಯದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

govt agricultural college at chikkaballapur
ಚಿಕ್ಕಬಳ್ಳಾಪುರ ರೇಷ್ಮೆ ಕೃಷಿ ವಿಶ್ವ ವಿದ್ಯಾಲಯ

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಬೂರು ರೇಷ್ಮೆ ಕೃಷಿ ವಿದ್ಯಾಲಯದಲ್ಲಿ ನಡೆದಿದೆ. ಕೃಷಿ ವಿಭಾಗದ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತಿದ್ದ ಪವಿತ್ರಾ ಎಸ್ (20) ಮೃತ ವಿದ್ಯಾರ್ಥಿನಿ.

ಈಕೆ ವಿಶ್ವ ವಿದ್ಯಾಲಯದ ಹಾಸ್ಟೆಲ್​​​ನಲ್ಲಿ ಉಳಿದುಕೊಂಡಿದ್ದಳು. ಕಳೆದ ರಾತ್ರಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ತನ್ನ ಸ್ನೇಹಿತನೊಂದಿಗೆ ವಿಡಿಯೋ ಕಾಲ್ ಮಾಡಿ ತನ್ನ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ಬಳಿಕ ಹಾಸ್ಟೆಲ್‌ನ ಸ್ನೇಹಿತೆಯರು ಹಾಗೂ ಕಾಲೇಜು ಸಿಬ್ಬಂದಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ.

ರೇಷ್ಮೆ ಕೃಷಿ ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ವಿದ್ಯಾರ್ಥಿನಿಯ‌ ಸಾವಿನ ಸುತ್ತ ಹಲವು ಅನುಮಾನಗಳು ಕೇಳಿ ಬರುತ್ತಿದೆ. ಘಟನೆಯ ಬಳಿಕ ಮಾತನಾಡಿದ ಪೋಷಕರು ಹಾಸ್ಟೆಲ್‌ನಲ್ಲಿ ರ‍್ಯಾಗಿಂಗ್‌ ನಡೆಯುತ್ತಿರುವುದಾಗಿ ಮಗಳು ತಿಳಿಸಿದ್ದಳು ಎಂದು ಹಾಸ್ಟೆಲ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಯುವತಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಚಿಂತಾಮಣಿ‌ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: ಜೂಜಾಟ ವಿಚಾರವಾಗಿ ಗುಂಪು ಗಲಾಟೆ: ಇಬ್ಬರು ಯುವಕರ ಕತ್ತು ಕೊಯ್ದ ದುಷ್ಕರ್ಮಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.