ETV Bharat / state

ಚಿಕ್ಕಬಳ್ಳಾಪುರ, ಬಳ್ಳಾರಿ ಕೋರ್ಟ್​​ಗಳಲ್ಲಿ ಟೈಪಿಸ್ಟ್​, ಜವಾನ ಹುದ್ದೆ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ

author img

By ETV Bharat Karnataka Team

Published : Dec 20, 2023, 1:51 PM IST

typist and peon, process server job notification from Chikkaballapur and ballari District Court
typist and peon, process server job notification from Chikkaballapur and ballari District Court

Court Jobs in Karnataka: ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಶೀಘ್ರಲಿಪಿಗಾರ ಗ್ರೇಡ್​ 3, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ, ಆದೇಶ ಜಾರಿಗಾರ, ಚಾಲಕ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಹುದ್ದೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ:

  • ಶೀಘ್ರಲಿಪಿಗಾರ 8
  • ಟೈಪಿಸ್ಟ್​​ 14
  • ಟೈಪಿಸ್ಟ್​- ಕಾಪಿಸ್ಟ್​​ 6
  • ಪ್ರೊಸೆಸ್​ ಸರ್ವರ್​​ 11
  • ಚಾಲಕ 1
  • ಜವಾನ 5

ವಿದ್ಯಾರ್ಹತೆ: ಶೀಘ್ರಲಿಪಿಗಾರ, ಟೈಪಿಸ್ಟ್​​, ಟೈಪಿಸ್ಟ್​​-ಕಾಪಿಸ್ಟ್​​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ವ ಪರೀಕ್ಷಾ ಮಂಡಳಿಯಿಂದ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಕಮರ್ಷಿಯಲ್​ ಪ್ರಾಕ್ಟೀಸ್​ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್​ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಪ್ರೌಢ ದರ್ಜೆ ಉತ್ತೀರ್ಣತೆ ಹೊಂದಿರಬೇಕು. ಪ್ರೊಸೆಸ್​​ ಸರ್ವರ್​​​, ಚಾಲಕ ಮತ್ತು ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2 ಎ, 2ಬಿ, 3ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಪ.ಜಾ, ಪಪಂ, ಪ್ರವರ್ಗ- 1, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 100 ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್​​ ಪಟ್ಟಿ, ಟೈಪಿಂಗ್​ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಡಿಸೆಂಬರ್​ 18ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಜನವರಿ 17 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಅಭ್ಯರ್ಥಿಗಳು chikkaballapur.dcourts.gov.in/judges/online-recruitment/ ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಪ್ರೊಸೆಸ್​ ಸರ್ವರ್​​ (ಆದೇಶ ಜಾರಿಗಾರ) ಹುದ್ದೆ

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 3 ಆದೇಶ ಜಾರಿಗಾರರ ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮೀಸಲಾತಿ ಹೊರತಾದ ಇತರೆ ಸಾಮಾನ್ಯ ಅಭ್ಯರ್ಥಿಗಳು 200 ರೂ ಅರ್ಜಿ ಶುಲ್ಕ ಪಾವತಿ ಮಾಡಬೇಕಿದೆ. ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಯ ಗರಿಷ್ಠ ವಯೋಮಿತಿ 35 ವರ್ಷ ಆಗಿದೆ.

ಈ ಹುದ್ದೆಗೆ ಡಿಸೆಂಬರ್​ 16ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಜನವರಿ 16 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ballari.dcourts.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಪ್ರೊಸೆಸ್ ಸರ್ವರ್ - ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.