ETV Bharat / state

ಚಿಕ್ಕಮಗಳೂರು: 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಬಿದ್ದ ಕಾರು.. 9 ಜನರ ಸ್ಥಿತಿ ಗಂಭೀರ

author img

By

Published : Jul 30, 2023, 8:28 PM IST

Updated : Jul 30, 2023, 11:03 PM IST

crime-9-people-condition-is-critical-due-to-car-accident-in-kalasa-at-chikkamagaluru
20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಬಿದ್ದ ಕಾರು: 9 ಜನರ ಸ್ಥಿತಿ ಗಂಭೀರ

ಕಾರೊಂದು ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಮನೆಯಂಗಳಕ್ಕೆ ಬಿದ್ದಿರುವ ಪರಿಣಾಮ ಅದರಲ್ಲಿದ್ದ 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಬಿದ್ದ ಕಾರು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ನಡೆದಿದೆ. ಕೋಲಾರದಿಂದ ಹೊರನಾಡಿಗೆ ಹೋಗುತ್ತಿದ್ದ ಕಾರು ಕಲ್ಮಕ್ಕಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಳಸ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು ಡಿಕ್ಕಿಯಾಗಿ ಬೈಕ್​ ಸವಾರನ ಸ್ಥಿತಿ ಗಂಭೀರ: ಕಾರು ಮತ್ತು ಬೈಕ್​ನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕುದುರೆಮುಖದ ನಲ್ಲಿಬೀಡು ಎಂಬಲ್ಲಿ ನಡೆದಿದೆ. ಕಾರು ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಕುದುರೆಮುಖ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದ್ಯ ಬೈಕ್​ ಸವಾರನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಕುದುರೆಮುಖ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್​ ಕಂಬಕ್ಕೆ ಡಿಕ್ಕಿಯಾದ ಕಾರು: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆಯುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್​ನ ಕಾಫಿ ಶಾಪ್​ ಸಮೀಪ ಈ ಘಟನೆ ನಡೆದಿದೆ. ಕಾರು ಅಪಘಾತದ ಶಬ್ದ ಕೇಳಿ ಸ್ಥಳೀಯರು ಕಾರಿನ ಬಳಿ ಓಡಿ ಹೋಗಿ ನೋಡಿದ್ದಾರೆ. ಕಾರಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ವೃದ್ಧನ ಮೇಲೆ ಏಕಾಏಕಿ ಗೂಳಿ ದಾಳಿ

ವೃದ್ಧನ ಮೇಲೆ ಏಕಾಏಕಿ ಗೂಳಿ ದಾಳಿ: ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೃದ್ಧನನ್ನು ಗೂಳಿ ಕೊಂಬುಗಳಿಂದ ಎತ್ತಿ ಬಿಸಾಡಿದ ಘಟನೆ ಶೃಂಗೇರಿ ಪಟ್ಟಣದ ಕಟ್ಟೆ ಬಾಗಿಲು ಬಳಿ ನಡೆದಿದೆ. ಗೂಳಿ ತಿವಿತಕ್ಕೆ ವೃದ್ಧ ಶ್ರೀನಿವಾಸಯ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ದೃಶ್ಯ ಹೋಟೆಲ್​ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಶ್ರೀನಿವಾಸಯ್ಯರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಸಿಲುಕಿ ಮಗು ಸಾವು: ಟ್ರ್ಯಾಕ್ಟರ್​ ಚಲಾಯಿಸುತ್ತಿದ್ದ ಬಾಲಕನ ಹತ್ಯೆ..!

Last Updated :Jul 30, 2023, 11:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.