ETV Bharat / state

ಸಚಿವ ಸಂಪುಟ ವಿಸ್ತರಣೆ ವಿಚಾರ: ಕಟೀಲ್​ ಭೇಟಿಯಾದ ಮೂಡಿಗೆರೆ ಶಾಸಕ

author img

By

Published : Nov 21, 2020, 3:33 PM IST

ಇಂದು ಮಂಗಳೂರಿಗೆ ಹೋದ ಶಾಸಕ ಎಂಪಿ ಕುಮಾರಸ್ವಾಮಿ, ಕಟೀಲ್ ಅವರನ್ನು ಭೇಟಿಯಾಗಿ ಸುದೀರ್ಘವಾಗಿ ಸಚಿವ ಸ್ಥಾನದ ಕುರಿತು ಚರ್ಚೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿಯಾದರೂ ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

mudigere mla meet nalin kumar katil
ಕಟೀಲ್​​ರನ್ನು ಭೇಟಿಯಾದ ಮೂಡಿಗೆರೆ ಶಾಸಕ

ಚಿಕ್ಕಮಗಳೂರು: ಸಚಿವ ಸಂಪುಟ ವಿಸ್ತರಣೆ ಆಗುತ್ತಿರುವ ಹಿನ್ನೆಲೆ, ಜಿಲ್ಲೆಯಿಂದ ಸಚಿವ ಸ್ಥಾನಕ್ಕಾಗಿ ಲಾಬಿ ಪ್ರಾರಂಭವಾಗಿದೆ. ಮೂಡಿಗೆರೆ ತಾಲೂಕಿನ ಶಾಸಕ ಎಂಪಿ ಕುಮಾರಸ್ವಾಮಿ ದಿಢೀರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಈ ಕುರಿತು ಮಾತಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸುತ್ತಿವೆ.

ಇಂದು ಮಂಗಳೂರಿಗೆ ಹೋದ ಶಾಸಕ ಎಂಪಿ ಕುಮಾರಸ್ವಾಮಿ, ಕಟೀಲ್ ಅವರನ್ನು ಭೇಟಿಯಾಗಿ ಸುದೀರ್ಘವಾಗಿ ಸಚಿವ ಸ್ಥಾನದ ಕುರಿತು ಚರ್ಚೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿಯಾದರೂ ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ, ಮೂಡಿಗೆರೆ ಬಿಜೆಪಿ ತಾಲೂಕು ಅಧ್ಯಕ್ಷ ರಘು ಸೇರಿ ಹಲವರು ಇವರಿಗೆ ಸಾಥ್ ನೀಡಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಇವರಿಗೆ ಸಚಿವ ಸ್ಥಾನ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.