ETV Bharat / state

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ಕಾಫಿ ತೋಟಕ್ಕೆ ನುಗ್ಗಿದ ಕಾರು ಪಲ್ಟಿ

author img

By

Published : Oct 12, 2020, 4:38 PM IST

Accident
ಚಿಕ್ಕಮಗಳೂರು

ಚಾಲಕನ ನಿಯಂತ್ರಣ ತಪ್ಪಿದ ಕಾರ್​ವೊಂದು ಕಾಫಿ ತೋಟಕ್ಕೆ ನುಗ್ಗಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಫಿ ತೋಟಕ್ಕೆ ನುಗ್ಗಿ ಪಲ್ಟಿಯಾಗಿರುವ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.

ಜಾವಳಿಯಿಂದ ಮೂಡಿಗೆರೆ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೂಡಲೇ ಸ್ಥಳೀಯರು ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.