ETV Bharat / state

ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ ಶಾಸಕ ಸಿ.ಟಿ ರವಿ

author img

By

Published : Jan 12, 2023, 8:37 PM IST

defamation-case
ಶಾಸಕ ಸಿ.ಟಿ ರವಿ

ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಚಿಕ್ಕಮಗಳೂರಿನ 2ನೇ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಶಾಸಕ ಸಿ.ಟಿ ರವಿ ಪ್ರತಿಕ್ರಿಯೆ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಅವರು ಅಕ್ರಮವಾಗಿ ಸಾವಿರಾರು ಕೋಟಿ ರೂ. ಆಸ್ತಿ ಸಂಪಾದಿಸಿದ್ದಾರೆ ಎಂದು ಇತ್ತೀಚೆಗೆ ಆರೋಪ ಮಾಡಿದ್ದ ಕೆಪಿಸಿಸಿ ವಕ್ತಾರ ಮೈಸೂರಿನ ಲಕ್ಷ್ಮಣ್ ವಿರುದ್ಧ ಚಿಕ್ಕಮಗಳೂರು ನಗರದ 2ನೇ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ತೆರಳಿದ ಸಿ.ಟಿ.ರವಿ, ತಮ್ಮ ಮೇಲೆ ಸುಳ್ಳು ಆರೋಪ ಹೊರಿಸಿ ಮಾನನಷ್ಟ ಮಾಡಿದ್ದಾರೆಂದು ಆರೋಪಿಸಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದರು. ಪ್ರಕರಣ ದಾಖಲಿಸಿಕೊಂಡ ನ್ಯಾಯಾಲಯ ಜ.21 ರಂದು ಸಿ.ಟಿ.ರವಿ ಹಾಗೂ ಸಾಕ್ಷಿದಾರರಿಂದ ಹೇಳಿಕೆ ಪಡೆಯಲು ದಿನ ನಿಗದಿ ಮಾಡಿದೆ. ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಹಲವು ಬಾರಿ ಶಾಸಕ ಸಿ.ಟಿ.ರವಿ ಅವರು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ಸರಕಾರಿ ಕಾಮಗಾರಿಗಳ ಗುತ್ತಿಗೆಯನ್ನು ಸಿ.ಟಿ.ರವಿ ಅವರ ಸಂಬಂಧಿಯೊಬ್ಬರು ಪಡೆದುಕೊಂಡು ಕಳಪೆ ಕಾಮಗಾರಿ ನಡೆಸಿ ಹಣ ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಬಹಿರಂಗವಾಗಿ ಆರೋಪ ಮಾಡಿದ್ದರು.

ಸದ್ಯ ಸಿ.ಟಿ.ರವಿ ಅವರು ತಮ್ಮ ಮೇಲಿನ ಆರೋಪಕ್ಕೆ ಪ್ರತಿಯಾಗಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಕಾನೂನು ಹೋರಾಟಕ್ಕಿಳಿದಿದ್ದಾರೆ. ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿ ಹೊರ ಬಂದ ಬಳಿಕ ಮಾತನಾಡಿದ ಸಿ.ಟಿ.ರವಿ, ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಯಾರ ಮೇಲೆ ಏನು ಬೇಕಾದರೂ ಹೇಳ ಬಹುದು ಅನ್ನುವಂತಹ ಮನಸ್ಥಿತಿಗೆ ಕೆಲವರು ಬಂದಿದ್ದಾರೆ. ಸುಳ್ಳು ಆರೋಪ ಮಾಡಿದ ಮೇಲೂ ಭಂಡತನದಿಂದ ಅದನ್ನು ಸಮರ್ಥಿಸಿಕೊಳ್ಳುವ ಕೆಟ್ಟ ಮನಸ್ಥಿತಿ ಅವರಲ್ಲಿದೆ. ಅವರ ಹೇಳಿಕೆಯಿಂದ ಸಾರ್ವಜನಿಕರಲ್ಲಿ ತನ್ನ ಮೇಲೆ ತಪ್ಪು ಅಭಿಪ್ರಾಯ ಮೂಡಿದ್ದು, ಇದಕ್ಕೆ ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯಲು ಮುಂದಾಗಿದ್ದೇನೆ ಎಂದು ಹೇಳಿದರು.

ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ: ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ, ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ಸ್ಯಾಂಟ್ರೋ ರವಿ ಬಿಜೆಪಿಯಲ್ಲಿ ಇದ್ರೋ ಇಲ್ವೋ ನನ್ನ ಬಳಿ ಮಾಹಿತಿ ಇಲ್ಲ. ಅವರಿಗೆ ಬಿಜೆಪಿ ಪಕ್ಷದಲ್ಲಿ ಯಾವುದೇ ಜವಾಬ್ದಾರಿ ಇರಲಿಲ್ಲ. ಬಿಜೆಪಿಯವರಿಗೆ ಒಂದು ಕಾನೂನು, ಕಾಂಗ್ರೆಸ್​ಗೆ ಒಂದು ಅಂತ ಎಲ್ಲೂ ಇಲ್ಲ. ತಪ್ಪು ಯಾರು ಮಾಡಿದ್ರು ತಪ್ಪೇ, ಶಿಕ್ಷೆ ಆಗಬೇಕು ಎಂದರು.

ತನಿಖೆ ನಂತರ ಯಾರು ಹಿಂದೆ ಇದ್ದಾರೆ, ಯಾವ ಪಾರ್ಟಿ ಇದೆ ಅನ್ನೋದು ಗೊತ್ತಾಗುತ್ತೆ. ನಮ್ಮ ಸರ್ಕಾರ ಐಜಿ ಮೇಲೂ ಕ್ರಮ ತೆಗೆದುಕೊಂಡಿದೆ. ಯಾರ ಮೇಲೂ ನಮ್ಮ ಸರ್ಕಾರ ಮುಲಾಜು ತೋರಿಸುವುದಿಲ್ಲ. ಕೇಸ್ ಮುಚ್ಚಿ ಹಾಕುವ, ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ, ಆಗಬೇಕು. ಎಂದು ಶಾಸಕ ಸಿಟಿ ರವಿ ಹೇಳಿದರು.

ಇದನ್ನೂ ಓದಿ: ಸ್ಯಾಂಟ್ರೋ ರವಿ ವಿರುದ್ಧ ಪ್ರತಿಭಟನೆ: ಸ್ಯಾಂಟ್ರೋ ಕಾರು ತಂದು ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್

ವಾಕ್​​ ಥಾನ್​ಗೆ ಚಾಲನೆ: ಇನ್ನು ಜನವರಿ 18ರಿಂದ ಐದು ದಿನ ಚಿಕ್ಕಮಗಳೂರು ಹಬ್ಬ ಹಿನ್ನೆಲೆ, ಇಂದು ವಾಕ್​​ಥಾನ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ವಾಕ್​ಥಾ​ನ್​ಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ ರವಿ ಚಾಲನೆ ನೀಡಿದ್ದು, ಇಂದಿನಿಂದ ವಾಕ್​​​ಥಾನ್ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ದೊರಕಿದೆ. ನಗರದ ಪ್ರಮುಖ ರಸ್ತೆಯಲ್ಲಿ ವಾಕ್​​​​ಥಾನ್ ನಡೆದಿದ್ದು, ನಗರದ ಐ ಜಿ ರಸ್ತೆ, ಹನುಮಂತಪ್ಪ ವೃತ್ತ, ಎಂ ಜಿ‌ ರಸ್ತೆಯಲ್ಲಿ ವಾಕಥಾನ್ ಸಾಗಿದೆ. ಸಾವಿರಾರು ಮಂದಿ ವಾಕ್​ಥಾನ್​ಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು: ಕಿಮ್ಮನೆ ರತ್ನಾಕರ್ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.