ETV Bharat / state

ನೀತಿ ಸಂಹಿತೆ ಉಲ್ಲಂಘನೆ: ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲು

author img

By

Published : Mar 31, 2023, 6:56 AM IST

Updated : Mar 31, 2023, 7:29 AM IST

ಎಂ ಪಿ ಕುಮಾಸ್ವಾಮಿ
ಎಂ ಪಿ ಕುಮಾಸ್ವಾಮಿ

ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಮೂಡಿಗೆರೆ ಬಿಜೆಪಿ ಶಾಸಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಮಗಳೂರು: ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ಮರುದಿನವೇ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗುರುವಾರ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಸ್ವಸಹಾಯ ಗುಂಪುಗಳಿಗೆ ಸರ್ಕಾರದ ಚೆಕ್ ವಿತರಣೆ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ತಾಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು. ಕೆಲ್ಲೂರು ಗ್ರಾಮದಲ್ಲಿರುವ ತಮ್ಮ ನಿವಾಸಕ್ಕೆ ಶಾಸಕರು ಎಲ್ಲ ಸ್ವಸಹಾಯ ಗುಂಪುಗಳ ಮಹಿಳೆಯರನ್ನು ಆಹ್ವಾನಿಸಿದ್ದರು.

ಆದರೆ, ನೀತಿ ಸಂಹಿತೆ ಜಾರಿಯಾಗಿದ್ದರೂ ಅನೇಕ ಜನರು ಶಾಸಕರ ನಿವಾಸದಲ್ಲಿ ಸೇರಿದ್ದರು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಚುನಾವಣಾ ಆಯೋಗದ ತಂಡ ಭೇಟಿ ನೀಡಿ ಪರಿಶೀಲಿಸಿದರು. ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಎಂ.ಪಿ.ಕುಮಾರಸ್ವಾಮಿ ವಿರುದ್ಧ ತಾಲೂಕು ಚುನಾವಣಾ ಅಧಿಕಾರಿ ಪಿ.ರಾಜೇಶ್ ಮೂಡಿಗೆರೆ ಪೋಲಿಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Explained: ಚುನಾವಣಾ ನೀತಿ ಸಂಹಿತೆ ಎಂದರೇನು? ತಿಳಿಯಬೇಕಾದ 10 ನಿಯಮಗಳು

"ಮಹಿಳಾ ಸಂಘಗಳಿಗೆ ಚೆಕ್ ವಿತರಣೆ ಮಾಡಬೇಕೆಂದು ಎರಡು ದಿನಗಳ ಹಿಂದೆ ಸಂಬಂಧಿಸಿದ ಅಧಿಕಾರಿಗಳಿಗೆ ಚೆಕ್ ತರಲು ತಿಳಿಸಿದ್ದೆ. ಆದರೆ ದಿಢೀರ್ ಎಂಬಂತೆ ಬುಧವಾರ ನೀತಿ ಸಂಹಿತೆ ಜಾರಿಯಾಯಿತು. ಕಾರ್ಯಕ್ರಮ ರದ್ದುಗೊಳಿಸಿರುವ ಬಗ್ಗೆ ನಿನ್ನೆಯೇ ಅನೇಕ ಸ್ವಸಹಾಯ ಸಂಘಗಳಿಗೆ ತಿಳಿಸಲಾಗಿತ್ತು. ಕೆಲವರಿಗೆ ಮಾಹಿತಿ ಸಿಗದೇ ಬೆಳಗ್ಗೆ ನನ್ನ ನಿವಾಸಕ್ಕೆ ಆಗಮಿಸಿದರು. ದೂರದೂರಿನಿಂದ ಬಂದವರಿಗೆ ಉಪಹಾರ ನೀಡಲಾಯಿತು. ಯಾವುದೇ ಚುನಾವಣೆ ಪ್ರಚಾರ ನಡೆಸಿಲ್ಲ" ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಚುನಾವಣಾ ನೀತಿ ಸಂಹಿತೆಯ ಮಾದರಿ ನೀತಿ ಸಂಹಿತೆ ಜಾರಿ: ಡಿ ಸಿ ಡಾ ಸೆಲ್ವಮಣಿ

'ನಾನು ದಲಿತ ಎಂದು ಹೀಗೆಲ್ಲ ಮಾಡುತ್ತಿದ್ದಾರೆ..': ಶಾಸಕ ಎಂ.ಪಿ.ಕುಮಾರಸ್ವಾಮಿ ಕಣ್ಣೀರು

Last Updated :Mar 31, 2023, 7:29 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.