ಚಿಕ್ಕಮಗಳೂರಿನ ರೆಸಾರ್ಟ್ನಲ್ಲಿ ರಿಲ್ಯಾಕ್ಸ್ ಮೂಡ್ನಲ್ಲಿರುವ ಮಾಜಿ ಸಿಎಂ ಎಚ್ಡಿಕೆ

ಚಿಕ್ಕಮಗಳೂರಿನ ರೆಸಾರ್ಟ್ನಲ್ಲಿ ರಿಲ್ಯಾಕ್ಸ್ ಮೂಡ್ನಲ್ಲಿರುವ ಮಾಜಿ ಸಿಎಂ ಎಚ್ಡಿಕೆ
HDK Meeting with Party MLAs: ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಮಗಳ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಚಿಕ್ಕಮಗಳೂರಿಗೆ ಆಗಮಿಸಲಿರುವ ಪಕ್ಷದ ಶಾಸಕರ ಜೊತೆಗೆ ಇಂದು ಎಚ್ ಡಿ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆಯ ಹನಿ ಡ್ಯೂ ರೆಸಾರ್ಟ್ನಲ್ಲಿ ಎಚ್ ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಿದ್ದು, ರೂಮ್ ಪಕ್ಕದಲ್ಲಿ ಎಚ್ಡಿಕೆ ವಾಕಿಂಗ್ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಎಚ್ ಡಿ ಕುಮಾರಸ್ವಾಮಿ ಕೂಲ್ ಆಗಿದ್ದು, ಜೆಡಿಎಸ್ ಪಕ್ಷದ ಶಾಸಕರ ಬರುವಿಕೆಗಾಗಿ ಕಾಯುತ್ತಿದ್ದಾರೆ.
ಜೆಡಿಎಸ್ನ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಅವರ ಮಗಳ ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಚಿಕ್ಕಮಗಳೂರಿಗೆ ಎಲ್ಲರೂ ಆಗಮಿಸುತ್ತಿದ್ದು, ಈ ವೇಳೆ ಅನೇಕ ರಾಜಕೀಯ ಚರ್ಚೆಗಳು ಹಾಗೂ ಬೆಳವಣಿಗೆಗಳು ಆಗುವ ಸಾಧ್ಯತೆ ಇದೆ. ಸಂಜೆ ವೇಳೆಗೆ ರೆಸಾರ್ಟ್ಗೆ ಎಲ್ಲಾ ಜೆಡಿಎಸ್ ಶಾಸಕರು ಆಗಮಿಸಲಿದ್ದು, ಇಂದು ತಮ್ಮ ಪಕ್ಷದ ಶಾಸಕರ ಜೊತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಚರ್ಚೆ ಮಾಡಲಿದ್ದಾರೆ. ಇದಕ್ಕೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಸಾಕ್ಷಿ ಆಗಲಿದೆ.
ಸಂಜೆ ಶಾಸಕರ ಜೊತೆ ರೆಸಾರ್ಟ್ನಲ್ಲಿ ಸಭೆ ನಡೆಸಲಿದ್ದು, ಎರಡು ದಿನಗಳ ಕಾಲ ರೆಸಾರ್ಟ್ನಲ್ಲಿ ಎಚ್ಡಿಕೆ ವಾಸ್ತವ್ಯ ಹೂಡಲಿದ್ದಾರೆ. ನಾಳೆ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಮಗಳ ನಿಶ್ಚಿತಾರ್ಥದಲ್ಲಿ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಎಲ್ಲ ಶಾಸಕರು ಭಾಗವಹಿಸಲಿದ್ದು, ನಿಶ್ಚಿತಾರ್ಥ ಕಾರ್ಯ ಮುಗಿಸಿ ಬೆಂಗಳೂರಿನ ಕಡೆ ಪ್ರಯಾಣ ಮಾಡಲಿದ್ದಾರೆ.
ರೆಸಾರ್ಟ್ನಲ್ಲಿ ರಿಲ್ಯಾಕ್ಸ್ ಮೂಡ್ನಲ್ಲಿರುವ ಕಾರಣ ರೆಸಾರ್ಟ್ನ ರೂಂನತ್ತ ಉಳಿದವರಿಗೆ ಪ್ರವೇಶ ನಿರಾಕರಿಸಲಾಗಿದೆ. ರೆಸಾರ್ಟ್ ಸಿಬ್ಬಂದಿ ಗೇಟ್ ಹಾಕಿ ಬಂದ್ ಮಾಡಿದ್ದು, ಮಾಧ್ಯಮಗಳಿಗೆ ಕುಮಾರಸ್ವಾಮಿ ಸಿಗೋದು ಡೌಟ್ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ಜೆಸಿಎಸ್ ಸಿದ್ಧತೆ: ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಜಾತ್ಯತೀತ ಜನತಾ ದಳ ಇತ್ತೀಚೆಗೆ ಬಿಜೆಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿತ್ತು. ಆ ನಂತರದಲ್ಲಿ ಜೆಡಿಎಸ್ ಬಿಜೆಪಿ ಪರ ಬ್ಯಾಟಿಂಗ್ ಶುರು ಮಾಡಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಉಳಿಸಿಕೊಳ್ಳುವ ದೂರದೃಷ್ಟಿಯಿಂದ ಜೆಡಿಎಸ್ ಪಕ್ಷ ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ.
ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಒಗ್ಗೂಡಿದ್ದು, 24 ಹಾಗೂ 4 ಸ್ಥಾನಗಳ ಹಂಚಿಕೆ ಈಗಾಗಲೇ ನಡೆದಿದೆ ಎಂದು ರಾಜ್ಯ ಬಿಜೆಪಿ ನಾಯಕರು ಖಚಿತಪಡಿಸಿದ್ದಾರೆ. ಮೈತ್ರಿ ಮಾತುಕತೆ ನಡೆಸಿದ್ದ ಸಂದರ್ಭದಲ್ಲಿ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಕೇಳಿತ್ತು. ಹಾಗಾಗಿ ಈ ಸ್ಥಾನಗಳನ್ನು ಬಿಟ್ಟು ಉಳಿದ 24 ಕ್ಷೇತ್ರಗಳಲ್ಲಿ ಬಿಜೆಪಿ ಸ್ಫರ್ಧೆ ಮಾಡಲು ನಿರ್ಧರಿಸಿತ್ತು.
ಆದರೆ, ಮಂಡ್ಯ ಕ್ಷೇತ್ರದ ಬಗ್ಗೆ ಬಿಜೆಪಿ ಸ್ಪಷ್ಟ ನಿಲುವು ವ್ಯಕ್ತಪಡಿಸಿಲ್ಲ. ಬಿಜೆಪಿಗೆ ಬೆಂಬಲ ಸೂಚಿಸಿರುವ ಸುಮಲತಾ ಅವರು ಮಂಡ್ಯದಲ್ಲಿ ಸಂಸದೆಯಾಗಿರುವ ಕಾರಣ, ಮಂಡ್ಯದ ಬದಲಾಗಿ ತುಮಕೂರು ಕ್ಷೇತ್ರವನ್ನು ಜೆಡಿಎಸ್ಗೆ ನೀಡುವ ಕುರಿತು ಬಿಜೆಪಿ ಚರ್ಚೆ ನಡೆಸಿತ್ತು. ಇದೀಗ ಜೆಡಿಎಸ್ನ ಎಲ್ಲಾ ಶಾಸಕರು ಒಂದೆಡೆ ಸೇರಿದ್ದು, ಲೋಕಸಭಾ ಚುನಾವಣೆಯ ಬಗ್ಗೆ ಮತ್ತೆ ಯಾವ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.
