ದತ್ತಪೀಠಕ್ಕೆ ಅರ್ಚಕರ ನೇಮಿಸಿದ ಸರ್ಕಾರ: ಚಿಕ್ಕಮಗಳೂರಿನಲ್ಲಿ ಸಂಭ್ರಮಾಚರಣೆ

author img

By

Published : Dec 4, 2022, 6:52 AM IST

state govt appointed priests to datta peeta

ಚಿಕ್ಕಮಗಳೂರು ತಾಲೂಕಿನ ಶ್ರೀ ಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗ ದತ್ತಪೀಠಕ್ಕೆ ರಾಜ್ಯ ಸರ್ಕಾರ ಇಬ್ಬರು ಅರ್ಚಕರನ್ನು ನೇಮಕ ಮಾಡಿದೆ.

ಚಿಕ್ಕಮಗಳೂರು: ದತ್ತಪೀಠಕ್ಕೆ ಹಿಂದೂ ಧರ್ಮೀಯ ಅರ್ಚಕರನ್ನು ನೇಮಕ ಮಾಡಬೇಕೆಂಬ ಬೇಡಿಕೆಗೆ ಸರ್ಕಾರ ಕೊನೆಗೂ ಒಪ್ಪಿಗೆ ನೀಡಿದೆ. ಶನಿವಾರ ಸಂಜೆ ಇಬ್ಬರು ಅರ್ಚಕರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಿಂದೂ-ಮುಸ್ಲಿಮರ ಸೌಹಾರ್ದ ಧಾರ್ಮಿಕ ಕೇಂದ್ರವಾಗಿದ್ದ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಕಳೆದ ಮೂರು ದಶಕಗಳಿಂದ ವಿವಾದದ ಕೇಂದ್ರವಾಗಿದ್ದು, ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಇತ್ತೀಚೆಗೆ ಸರ್ಕಾರ ನ್ಯಾಯಾಲಯದ ಆದೇಶದನ್ವಯ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಕೈಗೊಳ್ಳಬೇಕಾದ ಪೂಜಾ ವಿಧಾನಗಳ ಮೇಲ್ವಿಚಾರಣೆಗಾಗಿ 8 ಮಂದಿ ಸದಸ್ಯರನ್ನೊಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿತ್ತು. ಈ ಸಮಿತಿ ಇತ್ತೀಚೆಗೆ ಸಭೆ ನಡೆಸಿ ಹಿಂದೂ ಅರ್ಚಕರ ನೇಮಕ ಸಂಬಂಧ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಪ್ರಸ್ತಾವ ಸಲ್ಲಿಸಿತ್ತು.

ದತ್ತಪೀಠಕ್ಕೆ ಅರ್ಚಕರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಬಿಜೆಪಿ, ಸಂಘ ಪರಿವಾರದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಇದನ್ನೂ ಓದಿ: ದತ್ತಪೀಠ ಹಿಂದೂ ಅರ್ಚಕರ ನೇಮಕ ತಿರಸ್ಕರಿಸಿದ್ದ ಸಿದ್ದರಾಮಯ್ಯ ಯಾವಸೀಮೆ ಜಸ್ಟಿಸ್ : ಸಿ ಟಿ ರವಿ ಪ್ರಶ್ನೆ

ಚಿಕ್ಕಮಗಳೂರು ನಗರದಲ್ಲಿ ಸಂಭ್ರಮ: ಇದೀಗ ರಾಜ್ಯ ಸರ್ಕಾರ ದತ್ತಪೀಠದಲ್ಲಿ ಪೂಜಾ ವಿಧಾನಗಳನ್ನು ನೆರವೇರಿಸಲು ಇಬ್ಬರು ಅರ್ಚಕರನ್ನು ನೇಮಿಸಿದೆ. ಶೃಂಗೇರಿಯ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರದ ಸಂದೀಪ್ ನೇಮಕಗೊಂಡ ಅರ್ಚಕರಾಗಿದ್ದಾರೆ. ಸರ್ಕಾರದಿಂದ ಆದೇಶ ಹೊರ ಬೀಳುತ್ತಿದ್ದಂತೆ ಚಿಕ್ಕಮಗಳೂರು ನಗರದಲ್ಲಿ ಬಿಜೆಪಿ, ಸಂಘ ಪರಿವಾರದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಇದನ್ನೂ ಓದಿ: ದತ್ತಪೀಠ ಪ್ರಕರಣ : 67 ಸಂಘಟನೆಗಳಿಂದ ಅಹವಾಲು ಸ್ವೀಕಾರ

ದತ್ತಪೀಠದಲ್ಲಿ ಈ ಬಾರಿ ಹಿಂದೂ ಅರ್ಚಕರ ಪೂಜೆಯೊಂದಿಗೆ ದತ್ತ ಜಯಂತಿ ನಡೆಯಲಿದೆ ಎಂದು ಇತ್ತೀಚೆಗೆ ಶಾಸಕ ಸಿ ಟಿ ರವಿ ಹೇಳಿಕೆ ನೀಡಿದ್ದು, ಮುಂದಿನ ಒಂದು ವಾರದಲ್ಲಿ ಸರ್ಕಾರದಿಂದ ಈ ಸಂಬಂಧ ಆದೇಶ ಹೊರಬೀಳಲಿದೆ ಎಂದು ತಿಳಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.