ETV Bharat / state

ನಾಲ್ಕು ದಿನ ಕಳೆದರೂ ಪತ್ತೆಯಾಗದ ಬಾಲಕಿ ಮೃತ ದೇಹ: ಧಾರಾಕಾರ ಮಳೆಗೆ ಧರೆಗುರುಳಿದ ಮರಗಳು

author img

By

Published : Jul 7, 2022, 3:45 PM IST

ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಅವಾಂತರಗಳು ಸೃಷ್ಟಿಯಾಗಿದೆ. ಕಳೆದ ನಾಲ್ಕು ದಿನದ ಹಿಂದೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಧಾರಾಕಾರ ಮಳೆಗೆ ಹಲವೆಡೆ ಮರಗಳು ಧಾರಾಶಾಹಿಯಾಗಿದ್ದು, ಸಂಚಾರ ವ್ಯತ್ಯಯ ಉಂಟಾಗಿದೆ.

the-dead-body-of-the-girl-was-not-found-even-after-four-days
ನಾಲ್ಕು ದಿನ ಕಳೆದರೂ ಪತ್ತೆಯಾಗದ ಬಾಲಕಿಯ ಮೃತ ದೇಹ :ಧಾರಾಕಾರ ಮಳೆಗೆ ಧರೆಗುರುಳಿದ ಮರಗಳು

ಚಿಕ್ಕಮಗಳೂರು: ಮಳೆಯ ಆರ್ಭಟಕ್ಕೆ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಬಾಲಕಿ ಸುಪ್ರೀತಾಳ ಮೃತದೇಹ ನಾಲ್ಕು ದಿನ ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಬಾಲಕಿ ಸುಪ್ರೀತಾ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು. ಕಳೆದ ಕೆಲವು ದಿನಗಳಿಂದ ಕಾರ್ಯಾಚರಣೆ ಮುಂದುವರೆದಿದ್ದರೂ ಬಾಲಕಿಯ ಪತ್ತೆಯಾಗಿಲ್ಲ.

ನಿನ್ನೆ ಎಸ್ ಡಿ ಆರ್ ಎಫ್ ತಂಡವು ಆಗಮಿಸಿ ಶೋಧಕಾರ್ಯ ಮಾಡಿದ್ದು, ಸದ್ಯ ಮುಳುಗು ತಜ್ಞರಿಂದ ಶೋಧ ಕಾರ್ಯ ಮುಂದುವರೆದಿದೆ. ಕಾರ್ಯಾಚರಣೆ ಗೆ ಸ್ಥಳೀಯರು ಸಾಥ್ ನೀಡಿದ್ದು, ಹೊಸಪೇಟೆ ಯಿಂದ ಮದಗದಕೆರೆ ವರೆಗೂ ಶೋಧಕಾರ್ಯ ಮುಂದುವರಿದಿದೆ.

ನಾಲ್ಕು ದಿನ ಕಳೆದರೂ ಪತ್ತೆಯಾಗದ ಬಾಲಕಿಯ ಮೃತ ದೇಹ :ಧಾರಾಕಾರ ಮಳೆಗೆ ಧರೆಗುರುಳಿದ ಮರಗಳು

ಇನ್ನು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು, ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಕುದುರೆಮುಖ, ಶೃಂಗೇರಿ ತಾಲೂಕಿನಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಎನ್.ಆರ್‌.ಪುರ, ಕೊಪ್ಪ ತಾಲೂಕಿನಲ್ಲಿ ಭಾರಿ ಮಳೆ ಆಗುತ್ತಿದ್ದು, ಚಿಕ್ಕಮಗಳೂರು, ತರೀಕೆರೆ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಕೆಲವೆಡೆ ವಿದ್ಯುತ್‌ ಕಂಬಗಳು ಧರೆಗುರುಳಿವೆ.

ಮಲೆನಾಡಿನ ಕೆಲ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಮಳೆ ಮುಂದುವರೆದ ಹಿನ್ನೆಲೆ ಶಾಲೆಗಳಿಗೆ ರಜೆ ಮುಂದುವರಿಸಲಾಗಿದೆ. ಬಾಳೆಹೊಳೆ ಗ್ರಾಮದಲ್ಲಿ ರಾಜ್ಯ ಹೆದ್ದಾರಿಗೆ ಅಡ್ಡವಾಗಿ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಮಾಗುಂಡಿಯಿಂದ ಕಳಸಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಸಂಚಾರ ವ್ಯತ್ಯಯವಾಗಿದೆ.

ಇನ್ನು ಚಿಕ್ಕಮಗಳೂರು ತಾಲೂಕಿನ ಕೆಳಗೂರಿನಲ್ಲಿ ರಸ್ತೆಯ ಮರ ಉರುಳಿ ಬಿದ್ದಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಮರ ಧರೆಗೆ ಉರುಳಿದ್ದು, ಚಿಕ್ಕಮಗಳೂರು ಮೂಡಿಗೆರೆ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಸಂಚಾರ ವ್ಯತ್ಯಯವಾಗಿತ್ತು. ಸದ್ಯ ಮರಗಳ ತೆರವಿನ ಕಾರ್ಯ ಮುಂದುವರೆದಿದೆ.

ಓದಿ : ದೊಡ್ಡಬಳ್ಳಾಪುರ ಭೂವಿವಾದ: ಪಿಡಿಒ ನಂದಿನಿ ವಿರುದ್ಧ ದೂರು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.