ETV Bharat / state

Video- ಮಾಜಿ ಸಚಿವೆ ಮೋಟಮ್ಮ ಸಹೋದರನ ಕಾರ್​ ಮೇಲೆ ಬಿತ್ತು ಮರದ ಕೊಂಬೆ

author img

By

Published : Jul 6, 2022, 7:00 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ ಮಳೆ ಅಬ್ಬರ-ಮಾಜಿ ಸಚಿವೆ ಮೋಟಮ್ಮ ಅವರ ಸಹೋದರ ಅನಂತು ಕಾರಿನ ಮೇಲೆ ಬಿದ್ದ ಮರದ ಕೊಂಬೆಗಳು- ಐವರು ಪ್ರಾಣಾಪಾಯದಿಂದ ಪಾರು

ಮಾಜಿ ಸಚಿವೆ ಮೋಟಮ್ಮ ಸಹೋದರನ ಕಾರಿನ ಮೇಲೆ ಬಿದ್ದ ಮರದ ಕೊಂಬೆ
ಮಾಜಿ ಸಚಿವೆ ಮೋಟಮ್ಮ ಸಹೋದರನ ಕಾರಿನ ಮೇಲೆ ಬಿದ್ದ ಮರದ ಕೊಂಬೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ವರುಣನ ರೌದ್ರಾವತಾರಕ್ಕೆ ಎಲ್ಲೆಂದರಲ್ಲಿ ಮರಗಳು ಧರೆಗೆ ಉರುಳುತ್ತಿವೆ. ನಿರಂತರವಾಗಿ ಮಲೆನಾಡು ಭಾಗದಲ್ಲಿ ಮಳೆ ಸುರಿಯುತ್ತಿರುವ ಕಾರಣ, ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರದ ಕೊಂಬೆಗಳು ಬಿದ್ದಿವೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆ ಮೂಡಿಗೆರೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆಗಳು ಮುರಿದು ಬಿದ್ದಿವೆ.

ಮಾಜಿ ಸಚಿವೆ ಮೋಟಮ್ಮ ಸಹೋದರ ಅನಂತು ಕಾರಿನ ಮೇಲೆ ಕೊಂಬೆಗಳು ಬಿದ್ದಿದ್ದು, ಎಂ.ಎಸ್ ಅನಂತು ಪತ್ನಿ ಸೇರಿದಂತೆ ಕಾರಿನಲ್ಲಿದ್ದ ಐವರು ಈ ವೇಳೆ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.

ಮಾಜಿ ಸಚಿವೆ ಮೋಟಮ್ಮ ಸಹೋದರನ ಕಾರಿನ ಮೇಲೆ ಬಿದ್ದ ಮರದ ಕೊಂಬೆ

ಕಾರಿನ ಮೇಲೆ ಮರದ ಕೊಂಬೆಗಳು ಬೀಳುವ ಮೈ ಜುಮ್ ಎನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ಜರುಗಿದೆ.

ಇದನ್ನೂ ಓದಿ: 'ಹರ್​ ಘರ್ ತಿರಂಗಾ'ಅಭಿಯಾನ: ಸೂರತ್​​ನಲ್ಲಿ 10 ಕೋಟಿ ತ್ರಿವರ್ಣ ಧ್ವಜ ಸಿದ್ಧಪಡಿಸುವ ಗುರಿ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.