ETV Bharat / state

ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ

author img

By

Published : Dec 8, 2021, 1:21 PM IST

ತಕ್ಷಣವೇ ಕಾರ್ಯಕ್ರವೃತ್ತರಾದ ಪೊಲೀಸರು ಆರೋಪಿಯನ್ನು ಪೊಕ್ಸೋ ಕಾಯ್ದೆಯಡಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಈ ರೀತಿಯಾದ ದುರ್ಘಟನೆಗಳು ನಡೆಯುತ್ತಲೇ ಇವೆ..

Tried to rape on  little girl in chikmagaluru
ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ

ಚಿಕ್ಕಮಗಳೂರು : ಐದು ವರ್ಷದ ಪುಟ್ಟ ಬಾಲಕಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಮಾಡಲು ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ಜರುಗಿದೆ.

ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ಕೋಳೂರಿನ 36 ವರ್ಷದ ನಾರಾಯಣ ಎಂಬ ಆರೋಪಿಯು 5 ವರ್ಷದ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. ಘಟನೆಯ ಕುರಿತಾಗಿ ಬಾಲಕಿಯ ತಾಯಿ ಬಣಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಕ್ಷಣವೇ ಕಾರ್ಯಕ್ರವೃತ್ತರಾದ ಪೊಲೀಸರು ಆರೋಪಿಯನ್ನು ಪೊಕ್ಸೋ ಕಾಯ್ದೆಯಡಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಈ ರೀತಿಯಾದ ದುರ್ಘಟನೆಗಳು ನಡೆಯುತ್ತಲೇ ಇವೆ.

ಕಾನೂನಿನ ಭಯವಿಲ್ಲದೆ ನಿರಾತಂಕವಾಗಿ ಅತ್ಯಾಚಾರಿಗಳು ಇಂತಹ ಕೃತ್ಯದಲ್ಲಿ ಭಾಗಿಯಾಗಿ ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದ್ದಾರೆ. ಅತ್ಯಾಚಾರ ಎಸಗುವವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿ ಕಾನೂನಿನ ಅಡಿಯಲ್ಲಿ ಬರುವ ಎಲ್ಲಾ ಕ್ರಮಗಳನ್ನು ಶೀಘ್ರವಾಗಿ ಜರುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.