ETV Bharat / state

ನಿಂತಿದ್ದ ಲಾರಿಗೆ ಓಮ್ನಿ ಕಾರು ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

author img

By

Published : Oct 7, 2020, 2:42 PM IST

Updated : Oct 7, 2020, 2:50 PM IST

ಲಾರಿಗೆ ಓಮ್ನಿ ಕಾರು ಡಿಕ್ಕಿ
ಲಾರಿಗೆ ಓಮ್ನಿ ಕಾರು ಡಿಕ್ಕಿ

ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬುರುಜನರೊಪ್ಪ ಗೇಟ್ ಬಳಿ ನಡೆದಿದೆ.

ಚಿತ್ರದುರ್ಗ: ರಸ್ತೆ ಬದಿ ನಿಂತಿದ್ದ ಲಾರಿಗೆ ರಭಸವಾಗಿ ಓಮ್ನಿ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಾವನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಬುರುಜನರೊಪ್ಪ ಗೇಟ್ ಬಳಿ ನಡೆದಿದೆ.

ಅಪಘಾತದಲ್ಲಿ ವ್ಯಕ್ತಿ ಸಾವು
ಅಪಘಾತದಲ್ಲಿ ವ್ಯಕ್ತಿ ಸಾವು

ವೇರಿ ಮೂಲದ ಸುರೇಶ್ (40) ಮೃತ ವ್ಯಕ್ತಿ. ಇನ್ನು ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಹಿರಿಯೂರಿನ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ಹೊಡೆತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸದ್ಯ ಮೂವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ.

ಐಮಂಗಲ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Last Updated :Oct 7, 2020, 2:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.