ಮುರುಘಾ ಶ್ರೀಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

author img

By

Published : Sep 24, 2022, 7:15 AM IST

Updated : Sep 24, 2022, 7:24 AM IST

court-rejects-murugha-math-swamiji-bail-plea

ಮುರುಘಾ ಮಠದ ಶಿವಮೂರ್ತಿ ಶರಣರ ಜಾಮೀನು ಅರ್ಜಿಯು ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿದೆ.

ಚಿತ್ರದುರ್ಗ: ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ಈ ಹಿಂದಿನ ಆದೇಶದಂತೆ ಸೆ. 27ರವರೆಗೆ ಶ್ರೀಗಳಿಗೆ ನ್ಯಾಯಾಂಗ ಬಂಧನ ಅವಧಿ ಮುಂದುವರೆಯಲಿದೆ.

ಈ ಹಿಂದೆ ಸೆ.14ರಂದು ಸ್ವಾಮೀಜಿಯ ನ್ಯಾಯಾಂಗ ಬಂಧನ ಅಂತ್ಯ ಹಿನ್ನೆಲೆಯಲ್ಲಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​​ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಆಗ ನ್ಯಾಯಾಲಯವು​​ ನ್ಯಾಯಾಂಗ ಬಂಧನದ ಅವಧಿಯನ್ನು​ ಸೆ. 27ರವರೆಗೆ ವಿಸ್ತರಿಸಿತ್ತು.

ನ್ಯಾಯಾಂಗ ಬಂಧನ ವಿಸ್ತರಣೆ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿಯನ್ನು ತಿರಸ್ಕರಿಸಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಸದ್ಯ ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ ಮುರುಘಾಮಠದ ಶಿವಮೂರ್ತಿ ಶರಣರಿಗೆ ಯಶಸ್ವಿ ಆ್ಯಂಜಿಯೋಗ್ರಾಂ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯದ ಆದೇಶದಂತೆ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆ ತರಲಾಗಿತ್ತು.

ಪೋಕ್ಸೊ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಶರಣರು ಆರೋಪ ಎದುರಿಸುತ್ತಿದ್ದಾರೆ. ಕಿರುಕುಳ ಆರೋಪ ಪ್ರಕರಣದಲ್ಲಿ ಅವರು ಮತ್ತು ಇತರ ನಾಲ್ವರು ಆರೋಪಿಗಳಾಗಿದ್ದಾರೆ. ಮೈಸೂರಿನ ಒಡನಾಡಿ ಎನ್‌ಜಿಒ ಸೇವಾ ಸಂಸ್ಥೆ ದೂರು ದಾಖಲಿಸಿದ್ದು, ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾಯಿಸಲಾಗಿತ್ತು.

ಇದನ್ನೂ ಓದಿ: ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಅ್ಯಂಜಿಯೋಗ್ರಾಂ ಯಶಸ್ವಿಯಾಗಿದೆ: ಡಾ.ವಿರೂಪಾಕ್ಷಪ್ಪ

Last Updated :Sep 24, 2022, 7:24 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.