ETV Bharat / state

ಹೊಳಲ್ಕೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 15 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

author img

By

Published : Nov 13, 2021, 5:11 PM IST

morarji desai residential school students hospitalized
ಮಕ್ಕಳು ಅಸ್ವಸ್ಥ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಮೊರಾರ್ಜಿ ವಸತಿ ಶಾಲೆಯ(Morarji Desai residential school) 15 ಕ್ಕೂ ಹೆಚ್ಚು ಮಕ್ಕಳು ಊಟದ ಬಳಿಕ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ: ಊಟ ಸೇವಿಸಿದ ಬಳಿಕ 15ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ (Morarji Desai residential school)ನಡೆದಿದೆ.

ವಸತಿ ಶಾಲೆಯ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು

ವಸತಿ ಶಾಲೆಯಲ್ಲಿನ ಮಕ್ಕಳಲ್ಲಿ ಸುಮಾರು15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಬೇಧಿಯಾಗಿದ್ದು, ತಕ್ಷಣ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟೇ ಅಲ್ಲದೆ ಬೆಳಗ್ಗೆ ಕೂಡ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರೆಲ್ಲರನ್ನು ಆಸ್ಪತ್ರೆಗೆ ಕರೆತರಲಾಗಿದೆ. ಯಾವುದೇ ಪ್ರಾಣಾಪಾಯವಿಲ್ಲ, ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಆಸ್ಪತ್ರೆ ಅವ್ಯವಸ್ಥೆ:

ತಾಲೂಕು ಆಸ್ಪತ್ರೆಯಲ್ಲಿ ಮಕ್ಕಳ ಚಿಕಿತ್ಸೆಗೆ ಸೂಕ್ತ ಬೆಡ್​ಗಳ ವ್ಯವಸ್ಥೆ ಇಲ್ಲದ ಹಿನ್ನೆಲೆ ನೆಲದಲ್ಲಿಯೇ ಮಲಗಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ:ಕಾಲೇಜ್​ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್​.. POCSO ಕಾಯ್ದೆಯಡಿ ಶಿಕ್ಷಕ ಅರೆಸ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.