ETV Bharat / state

ಮಾದಕ ವ್ಯಸನದ ವಿರುದ್ಧ ಕ್ರಮಕ್ಕೆ ಮುಂದಾಗಿರುವುದು ಸ್ವಾಗತಾರ್ಹ: ಶಿವಮೂರ್ತಿ ಮುರುಘಾ ಶರಣರು

author img

By

Published : Sep 7, 2020, 6:53 PM IST

shivamurthi murugha sharana statement about drug mafiya
ಮಾದಕ ವ್ಯಸನದ ವಿರುದ್ಧ ಕ್ರಮಕ್ಕೆ ಮುಂದಾಗಿರುವ ನಡೆ ಸ್ವಾಗತರ್ಹ: ಶಿವಮೂರ್ತಿ ಮುರುಘಾ ಶರಣರು

ಸಮಾಜದ ಮೇಲೆ ದುಷ್ಪರಿಣಾಮ ಬೀರುವ ಮಾದಕ ವ್ಯಸನದ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಪೊಲೀಸ್​ ಇಲಾಖೆ ಹಾಗೂ ಸರ್ಕಾರದ ನಡೆ ಸ್ವಾಗತಾರ್ಹ. ಇಂಥ ಸಾಮಾಜಿಕ ಪಿಡುಗಿನ ವಿರುದ್ಧ ನಾವು ಜಾಗೃತಿ ಮೂಡಿಸುವ ಅಗತ್ಯತೆ ಇದೆ ಎಂದು ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಚಿತ್ರದುರ್ಗ: ಮಾದಕ ವ್ಯಸನ ಎಂಬುದು ಇಡೀ ಜಗತ್ತಿಗೆ ಹಾಗೂ ಮನುಕುಲಕ್ಕೆ ಆವರಿಸಿರುವ ಸಾಮಾಜಿಕ ಪಿಡುಗು ಎಂದು ಮುರುಘಾ ಮಠದ ಪೀಠಾಧಿಪತಿ ಶ್ರೀ ಶಿವಮೂರ್ತಿ ಮುರುಘಾ ಶರಣರು ಕಳವಳ ವ್ಯಕ್ತಪಡಿಸಿದ್ದಾರೆ.

ಮಾದಕ ವ್ಯಸನದ ವಿರುದ್ಧ ಕ್ರಮಕ್ಕೆ ಮುಂದಾಗಿರುವ ನಡೆ ಸ್ವಾಗತಾರ್ಹ: ಶಿವಮೂರ್ತಿ ಮುರುಘಾ ಶರಣರು

ಡ್ರಗ್​ ಮಾಫಿಯಾ ಕುರಿತಂತೆ ಮುರುಘಾಮಠದಲ್ಲಿ ಪ್ರತಿಕ್ರಿಯಿಸಿದ ಅವರು, ಸಮಾಜದ ಮೇಲೆ ದುಷ್ಪರಿಣಾಮ ಬೀರುವ ಮಾದಕ ವ್ಯಸನದ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಪೊಲೀಸ್​ ಇಲಾಖೆ ಹಾಗೂ ಸರ್ಕಾರದ ನಡೆ ಸ್ವಾಗತಾರ್ಹ. ಇಂಥ ಸಾಮಾಜಿಕ ಪಿಡುಗಿನ ವಿರುದ್ಧ ನಾವು ಜಾಗೃತಿ ಮೂಡಿಸುವ ಅಗತ್ಯತೆ ಇದೆ ಎಂದರು.

ಸ್ಯಾಂಡಲ್​ವುಡ್​ನಲ್ಲಿ ಬಿರುಗಾಳಿ ಎಬ್ಬಿಸಿರುವ ಡ್ರಗ್ ಮಾಫಿಯಾ ಪ್ರಕರಣದಲ್ಲಿ ಹಲವು ನಟ-ನಟಿಯರ ವಿರುದ್ಧ ಆರೋಪಗಳು ಕೇಳಿ ಬಂದಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿಯನ್ನು ಸಿಸಿಬಿ ಪೋಲಿಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.