ETV Bharat / state

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ.. ದೀಪಾವಳಿ ಹಬ್ಬದಂದೇ ಪ್ರಾಣಬಿಟ್ಟ ಮೂವರು

author img

By

Published : Oct 25, 2022, 7:26 AM IST

ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

people killed in Terrible car accident  Terrible car accident in Chitradurga  Car hit to divider  ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ  ದೀಪಾವಳಿ ಹಬ್ಬದಂದೇ ಪ್ರಾಣಬಿಟ್ಟ ಮೂವರು  ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ  ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತ  ಪ್ರವಾಸಿ ಮಂದಿರದ ಮುಂಭಾಗದ ರಸ್ತೆ ವಿಭಜಕಕ್ಕೆ ಡಿಕ್ಕಿ  ದೀಪಾವಳಿ ಹಬ್ಬದಂದೇ ಮೂವರು ಮೃತ  ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ
ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ

ಚಿತ್ರದುರ್ಗ: ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಸೋಮವಾರ ಮಧ್ಯರಾತ್ರಿ ಸುಮಾರು 12 ಗಂಟೆಯ ಸಮಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

people killed in Terrible car accident  Terrible car accident in Chitradurga  Car hit to divider  ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ  ದೀಪಾವಳಿ ಹಬ್ಬದಂದೇ ಪ್ರಾಣಬಿಟ್ಟ ಮೂವರು  ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ  ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತ  ಪ್ರವಾಸಿ ಮಂದಿರದ ಮುಂಭಾಗದ ರಸ್ತೆ ವಿಭಜಕಕ್ಕೆ ಡಿಕ್ಕಿ  ದೀಪಾವಳಿ ಹಬ್ಬದಂದೇ ಮೂವರು ಮೃತ  ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ
ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ

ಗಾಂಧಿ ವೃತ್ತದ ಕಡೆಗೆ ಹೋಗುವಾಗ ವೇಗವಾಗಿ ಬಂದ ಕಾರೊಂದು ಪ್ರವಾಸಿ ಮಂದಿರದ ಮುಂಭಾಗದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರು ಚಾಲಕ ಮನು ಸೇರಿದಂತೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಉಳಿದ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು. ದೀಪಾವಳಿ ಹಬ್ಬದಂದೇ ಮೂವರು ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಮಧ್ಯರಾತ್ರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ತಿಳಿದು ಬರಬೇಕಾಗಿದೆ.

ಓದಿ: ಬಿಎಂಟಿಸಿ ಬಸ್​ ಅಪಘಾತ ಪ್ರಕರಣ.. ನೂರಾರು ಕನಸು ಹೊತ್ತು ಓದಲು ತೆರಳಿದ್ದ ಮಗಳು ಜೀವಂತವಾಗಿ ಬರಲೇ ಇಲ್ಲ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.