ETV Bharat / state

ಹಿರಿಯೂರು ಬಳಿ ಭೀಕರ ರಸ್ತೆ ಅಪಘಾತ... ಇಬ್ಬರು ಸಾವು, ನಾಲ್ವರು ಮಕ್ಕಳು ಸೇರಿ ಐವರ ಸ್ಥಿತಿ ಗಂಭೀರ

author img

By

Published : Aug 21, 2020, 2:07 PM IST

Updated : Aug 21, 2020, 2:15 PM IST

Two died and Five injured in road accident, Two died in road accident, Chitradurga road accident, Chitradurga road accident news, ರಸ್ತೆ ಅಪಘಾತದಲ್ಲಿ ಇಬ್ಬರ ಸಾವು ಮತ್ತು ಐವರಿಗೆ ಗಾಯ, ಚಿತ್ರದುರ್ಗದ ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಚಿತ್ರದುರ್ಗ ರಸ್ತೆ ಅಪಘಾತದಲ್ಲಿ ಇಬ್ಬರ ಸಾವು ಸುದ್ದಿ, ಚಿತ್ರದುರ್ಗ ರಸ್ತೆ ಅಪಘಾತ, ಚಿತ್ರದುರ್ಗ ರಸ್ತೆ ಅಪಘಾತ ಸುದ್ದಿ,
ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ

ತಡೆಗೋಡೆಗೆ ಕಾರ್​ ರಭಸವಾಗಿ ಗುದ್ದಿದ ಪರಿಣಾಮ ಅದರಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಚಿತ್ರದುರ್ಗ: ಕಾರ್​ವೊಂದು ರಸ್ತೆಯ ತಡೆಗೋಡೆಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಆನೆಸಿದ್ರಿ ಗ್ರಾಮದ ಬಳಿ ಘಟನೆ ನಡೆದಿದೆ.

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ

ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ನಾಲ್ವರು ಮಕ್ಕಳು ಸೇರಿದಂತೆ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ಯಾವುದೇ ಗುರುತು ಪತ್ತೆಯಾಗಿಲ್ಲ. ಹಿರಿಯೂರು ಗ್ರಾಮಾಂತರ ಠಾಣೆಯ ಸಿಪಿಐ ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

Last Updated :Aug 21, 2020, 2:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.