ETV Bharat / state

ಮಂಗಳೂರಿನಲ್ಲಿ ಹೋಳಿ ಸಂಭ್ರಮದ ಡಿಜೆ ಪಾರ್ಟಿ ಮೇಲೆ ಸಂಘಟನೆಯೊಂದರ ಕಾರ್ಯಕರ್ತರಿಂದ ದಾಳಿ

author img

By

Published : Mar 26, 2023, 4:14 PM IST

Updated : Mar 26, 2023, 6:41 PM IST

activists-of-an-organization-attacked-the-dj-party-of-holi-celebrations
ಮಂಗಳೂರಿನಲ್ಲಿ ಹೋಳಿ ಸಂಭ್ರಮದ ಡಿಜೆ ಪಾರ್ಟಿ ಮೇಲೆ ಸಂಘಟನೆಯೊಂದರ ಕಾರ್ಯಕರ್ತರಿಂದ ದಾಳಿ

ಮಂಗಳೂರಿನಲ್ಲಿ ಹೋಳಿ ಸಂಭ್ರಮದ ಡಿಜೆ ಪಾರ್ಟಿಯ ಅಶ್ಲೀಲ ವರ್ತನೆ ಎಂದು ಆರೋಪಿಸಿ ಹೋಳಿ ಸಂಭ್ರಮದ ಡಿಜೆ ಪಾರ್ಟಿ ನಡೆಯುತ್ತಿದ್ದ ಸ್ಥಳಕ್ಕೆ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಹೋಳಿ ಸಂಭ್ರಮದ ಡಿಜೆ ಪಾರ್ಟಿ ಮೇಲೆ ಸಂಘಟನೆಯೊಂದರ ಕಾರ್ಯಕರ್ತರಿಂದ ದಾಳಿ

ಮಂಗಳೂರು: ನಗರದಲ್ಲಿ 'ರಂಗ್ ದೇ ಬರ್ಸಾ' ಎಂಬ ಹೆಸರಿನಲ್ಲಿ ಹೋಳಿ ಆಚರಣೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಕಂಕನಾಡಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೋಳಿ ಸಂಭ್ರಮದ ಕಾರ್ಯಕ್ರಮದಲ್ಲಿ ಡಿಜೆ ಪಾರ್ಟಿಯೊಂದಿಗೆ ಯುವಕ-ಯುವತಿಯರು ಬಣ್ಣ ಎರಚಿ ಸಂಭ್ರಮ ಪಡುತ್ತಿದ್ದರು. ಇದು ಅಶ್ಲೀಲ ವರ್ತನೆ ಎಂದು ಆರೋಪಿಸಿ ಹೋಳಿ ಸಂಭ್ರಮದ ಡಿಜೆ ಪಾರ್ಟಿ ನಡೆಯುತ್ತಿದ್ದ ಸ್ಥಳಕ್ಕೆ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಡಿಜೆ ಪಾರ್ಟಿಯ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದು ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಈ ವೇಳೆ ಕಾರ್ಯಕರ್ತರು ಹಾಗೂ ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಆಯೋಜಕರು ಹಾಗೂ ಹಲವರ ಮೇಲೆ ಹಲ್ಲೆಗೂ ಯತ್ನಿಸಿದ ಘಟನೆ ನಡೆದಿದೆ. ತಕ್ಷಣ ಪೊಲೀಸರು ಮಧ್ಯ ಪ್ರವೇಶಿಸಿ ಆರು ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್‌ ಒಟ್ಟು 6 ಮಂದಿ ಹೋಗಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಕೆಲವು ಪೋಸ್ಟರ್‌ಗಳಿಗೆ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಂಟ್ವಾಳ: ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ, ಬಸ್ ಕಂಡಕ್ಟರ್ ಬಂಧನ

Last Updated :Mar 26, 2023, 6:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.