ETV Bharat / state

ಬಂಟ್ವಾಳ : ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

author img

By

Published : Sep 22, 2020, 10:26 PM IST

ವಶಪಡಿಸಿಕೊಂಡಿರುವ ಮದ್ಯದ ಮೌಲ್ಯ 3,360 ರೂ. ಎಂದು ಅಂದಾಜಿಸಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಇಬ್ಬರ ಬಂಧನ
ಇಬ್ಬರ ಬಂಧನ

ಬಂಟ್ವಾಳ: ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವಿಟ್ಲ ಪೊಲೀಸ್ ಠಾಣೆಯ ಎಸ್ ಐ ವಿನೋದ್ ರೆಡ್ಡಿ ಹಾಗೂ ತಂಡ ಬಂಧಿಸಿದೆ. ಆರೋಪಿಗಳಿಂದ 96 ಮದ್ಯದ ಟೆಟ್ರಾ ಪ್ಯಾಕೇಟ್​ಗಳನ್ನು ವಶಪಡಿಸಿಕೊಂಡಿದ್ದಾರೆ.

ಸುವರ್ಣ ನಾಯ್ಕ್ ಹಾಗೂ ಮಹ್ಮದ್ ಶರೀಫ್ ಎಂಬುವರು ಬಂಧಿತ ಆರೋಪಿಗಳು. ಇವರು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವ ಕುರಿತು ಮಾಹಿತಿ ಪಡೆದ ಎಸ್‌ ಐ ವಿನೋದ್ ರೆಡ್ಡಿ, ವಿಟ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಆರೋಪಿಗಳನ್ನು ತಡೆದು 90 ಎಮ್​ಎಲ್ ಮದ್ಯ ತುಂಬಿದ 96 ಟೆಟ್ರಾ ಪ್ಯಾಕೇಟ್​ಗಳನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡಿರುವ ಮದ್ಯದ ಮೌಲ್ಯ 3,360 ರೂ. ಎಂದು ಅಂದಾಜಿಸಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.