ಬಂಟ್ವಾಳ ಬಾಲಕಿ ಅಪಹರಣ, ಅತ್ಯಾಚಾರ ಪ್ರಕರಣ : ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿದ ಕೋರ್ಟ್

author img

By

Published : Oct 10, 2021, 4:45 PM IST

ಬಂಟ್ವಾಳ ಬಾಲಕಿ ಅಪಹರಣ, ಅತ್ಯಾಚಾರ ಪ್ರಕರಣ

ಅಡಿಷನಲ್ ಎಸ್ಪಿ ಡಾ. ಶಿವಕುಮಾರ್ ಮಾರ್ಗದರ್ಶನದಲ್ಲಿ, ಬಂಟ್ವಾಳ ಎ.ಎಸ್.ಪಿ.ಶಿವಾಂಶು ರಜಪೂತ್ ನೇತೃತ್ವದಲ್ಲಿ ಬಂಟ್ವಾಳ ಪೊಲೀಸರ ತಂಡದ ಸಹಕಾರದೊಂದಿಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿತ್ತು. ಬೇರೆ ಬೇರೆ ಪ್ರದೇಶಗಳಲ್ಲಿದ್ದ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ವಿಚಾರಣೆ ನಡೆಸಿದಾಗ ಮಂಗಳೂರಿನಲ್ಲಿ ಈ ಕೃತ್ಯ ನಡೆದಿರುವ ಬಗ್ಗೆ ಆರೋಪಿಗಳು ಬಾಯಿಬಿಟ್ಟಿರುವುದಾಗಿ ಎಸ್‌ಪಿ ತಿಳಿಸಿದರು..

ಬಂಟ್ವಾಳ : ಶುಕ್ರವಾರ ಮಂಗಳೂರಿನಲ್ಲಿ ಬಂಟ್ವಾಳದ ಬಾಲಕಿಯೊಬ್ಬಳ ಮೇಲೆ ಸ್ನೇಹಿತನಿಂದಲೇ ಅಪ್ರಾಪ್ತೆಯ ಅಪಹರಣ, ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಬಂಧಿತರಾಗಿದ್ದ ನಾಲ್ವರನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಕೋರ್ಟ್‌ ಆದೇಶಿಸಿದೆ.

ಆರೋಪಿಗಳಾದ ಕಾಪು ನಿವಾಸಿ ಕೆ ಎಸ್ ಶರತ್ ಶೆಟ್ಟಿ, ಮಾರುತಿ ಮಂಜುನಾಥ್, ಲಾಡ್ಜ್ ಸತೀಶ್ ಹಾಗೂ ಇದಾಯತ್ತುಲ್ಲ ಎಂಬ ನಾಲ್ವರನ್ನು ಇಂದು ಮಂಗಳೂರಿನ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು.

ಕೋರ್ಟ್‌ಗೆ ಆರೋಪಿಗಳನ್ನ ಹಾಜರುಪಡಿಸಿರುವ ಕುರಿತು ಎಸ್‌ಪಿ ಋಷಿಕೇಶ್ ಭಗವಾನ್ ಸೋನಾವಣೆ ಮಾಹಿತಿ ನೀಡಿರುವುದು..

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಪ್ರಕರಣದಲ್ಲಿ ಬಾಲಕಿಯ ದೂರು ಮತ್ತು ಆರೋಪಿಗಳ ವಿಚಾರಣೆಯ ಬಳಿಕ ಇಡೀ ಪ್ರಕರಣದಲ್ಲಿ ಬಾಲಕಿಯ ಪರಿಚಿತ ವ್ಯಕ್ತಿಗಳಾದ ಇಬ್ಬರು ಸೇರಿ ಒಟ್ಟು ನಾಲ್ವರು ಆರೋಪಿಗಳಿರುವುದು ಖಚಿತವಾಗಿದೆ ಎಂದರು.

ಅಡಿಷನಲ್ ಎಸ್ಪಿ ಡಾ. ಶಿವಕುಮಾರ್ ಮಾರ್ಗದರ್ಶನದಲ್ಲಿ, ಬಂಟ್ವಾಳ ಎ.ಎಸ್.ಪಿ.ಶಿವಾಂಶು ರಜಪೂತ್ ನೇತೃತ್ವದಲ್ಲಿ ಬಂಟ್ವಾಳ ಪೊಲೀಸರ ತಂಡದ ಸಹಕಾರದೊಂದಿಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿತ್ತು. ಬೇರೆ ಬೇರೆ ಪ್ರದೇಶಗಳಲ್ಲಿದ್ದ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ವಿಚಾರಣೆ ನಡೆಸಿದಾಗ ಮಂಗಳೂರಿನಲ್ಲಿ ಈ ಕೃತ್ಯ ನಡೆದಿರುವ ಬಗ್ಗೆ ಆರೋಪಿಗಳು ಬಾಯಿಬಿಟ್ಟಿರುವುದಾಗಿ ಎಸ್‌ಪಿ ತಿಳಿಸಿದರು.

ಆರಂಭದಲ್ಲಿ ತನ್ನನ್ನು ಕಾರಿನಲ್ಲಿ ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ ಎಂಬ ದೂರಿನಂತೆ ತನಿಖೆ ನಡೆಸಿದ ವೇಳೆ ಈ ಅಂಶ ಬಯಲಿಗೆ ಬಂದಿದೆ ಎಂದು ತಿಳಿಸಿದರು. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಎಸ್ಪಿ ಶಿವಾಂಶು ರಜಪೂತ್ ಅವರ ನೇತೃತ್ವದ ಇನ್ಸ್‌ಪೆಕ್ಟರ್ ಟಿ.ಡಿ.ನಾಗರಾಜ್, ಬಂಟ್ವಾಳ ಎಸ್ಸೈ ಅವಿನಾಶ್ ಗೌಡ ಹಾಗೂ ಸಹಕರಿಸಿದ ಎಸ್ಸೈ ಪ್ರಸನ್ನ ಈ ಸಂದರ್ಭ ಉಪಸ್ಥಿತರಿದ್ದರು. ಆರೋಪಿಗಳನ್ನು ಭಾನುವಾರ ಮಧ್ಯಾಹ್ನ ಕೋರ್ಟಿಗೆ ಹಾಜರುಪಡಿಸಲಾಗಿತ್ತು. ಆರೋಪಿಗಳಿಗೆ ಈಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.