ETV Bharat / state

ಡೂಪ್ಲಿಕೇಟ್ ಮತ ಕಳೆದುಕೊಳ್ಳುವ ಭೀತಿಯಲ್ಲಿ ಕಾಂಗ್ರೆಸ್ ಆರೋಪಿಸುತ್ತಿದೆ: ಸಿಎಂ ಬೊಮ್ಮಾಯಿ

author img

By

Published : Nov 19, 2022, 2:43 PM IST

bommai
ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮತದಾರರ ಮಾಹಿತಿ ಖಾಸಗಿ ಸಂಸ್ಥೆ ಮೂಲಕ ಕದಿಯುವ ಕಾರ್ಯವನ್ನು ಬಿಜೆಪಿ ಮಾಡುತ್ತಿದೆ ಎಂಬ ಕಾಂಗ್ರೆಸ್​ ಆರೋಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಮಂಗಳೂರು: ವೋಟರ್ ಲಿಸ್ಟ್ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್​ನವರು ಡುಪ್ಲಿಕೇಟ್ ಮತ ಕಳೆದುಕೊಳ್ಳುವ ಭೀತಿಯಲ್ಲಿ ಹೀಗೆಲ್ಲಾ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ನವರು ಮಾಡುತ್ತಿರುವ ಆರೋಪಕ್ಕೆ ಯಾವುದೇ ಸಾಕ್ಷಿ, ಪುರಾವೆಗಳಿಲ್ಲ. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಹೆಸರು ಸೇರಿಸುವುದು, ತೆಗೆದು ಹಾಕುವುದು ಚುನಾವಣಾ ಇಲಾಖೆಯ ಕೆಲಸ. ಪ್ರತಿ ವರ್ಷವೂ ಇದು ನಡೆಯುತ್ತದೆ. 18 ವರ್ಷ ತುಂಬಿದವರನ್ನು ವೋಟರ್ ಲಿಸ್ಟ್​ಗೆ ಸೇರಿಸುವುದು, ಸ್ಥಳಾಂತರ ಆದವರು ಹಾಗೂ ಎರಡೆರಡು ಕಡೆ ಮತ ಇರುವವರನ್ನು ತೆಗೆಯುತ್ತಾರೆ ಎಂದರು.

ಇದನ್ನೂ ಓದಿ: ಮತದಾರರ ಮಾಹಿತಿಯನ್ನು ಖಾಸಗಿ ಕಂಪನಿ ಮೂಲಕ ಸರ್ಕಾರ ಕದಿಯುತ್ತಿದೆ: ಸುರ್ಜೇವಾಲಾ

ಕಾಂಗ್ರೆಸ್​ ಮಾಡುತ್ತಿರುವ ಆರೋಪದ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಯಾವುದೇ ಸಂಸ್ಥೆಗಳು ತಪ್ಪು ಮಾಡಿದರೆ ತೀವ್ರ ಗತಿಯಲ್ಲಿ ತನಿಖೆ ನಡೆಯುತ್ತದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.