ETV Bharat / state

ಅವಾಚ್ಯ ಶಬ್ದಗಳಿಂದ ಸಿಎಂ, ಡಿಸಿಎಂ ನಿಂದಿಸಿದ ಆರೋಪ: ಪ್ರಕರಣ ದಾಖಲು

author img

By ETV Bharat Karnataka Team

Published : Dec 16, 2023, 12:14 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Mangaluru
ಮಂಗಳೂರು

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಬಜ್ಪೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುತ್ತೂರು ಗ್ರಾಮ ಪಂಚಾಯತ್​ನ ಉಪಾಧ್ಯಕ್ಷೆ ಸುಷ್ಮಾ ಎಂಬುವರ ಪತಿ ಸಂತೋಷ್ ಎಂಬಾತ ಸಿಎಂ ಮತ್ತು ಡಿಸಿಎಂ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ್ದರು. ಅಷ್ಟೇ ಅಲ್ಲದೆ, ತಮ್ಮ ಪತ್ನಿ ಉಪಾಧ್ಯಕ್ಷೆ ಎಂಬ ಅಹಂನಿಂದ ಮುತ್ತೂರು ಗ್ರಾಮ ಪಂಚಾಯತ್​ಗೆ ಬಂದು ಫೈಲ್​ಗಳನ್ನು ನೋಡುವುದು, ಅಧಿಕಾರಿಗಳಿಗೆ ಬೇಕಾಬಿಟ್ಟಿ ಆದೇಶ ನೀಡುವುದು ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿತ್ತು. ಈ ದೂರಿನ ಆಧಾರದ ಮೇರೆಗೆ ಆರೋಪಿ ಸಂತೋಷ್ ಬೊಳಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ : ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣ : ಕಾಕತಿ ಸಿಪಿಐ ಅಮಾನತು, ಬೆಳಗಾವಿಗೆ ಆಗಮಿಸಿದ ಕೇಂದ್ರ ಬಿಜೆಪಿ ತಂಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.