ETV Bharat / state

ಮಂಗಳೂರಿನ ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ

author img

By

Published : Oct 24, 2021, 11:08 AM IST

ನಿಗದಿತ ಸಮಯಕ್ಕಿಂತ ಹೆಚ್ಚು ತೆರೆಯಲಾಗಿದ್ದ ಮಂಗಳೂರು ನಗರದ ಎಂ.ಜಿ.ರಸ್ತೆಯಲ್ಲಿರುವ ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ, ಧ್ವನಿವರ್ಧಕಗಳನ್ನು ವಶಪಡಿಸಿಕೊಂಡಿದ್ದಾರೆ.

Mangalure
ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ

ಮಂಗಳೂರು: ನಗರದ ಎಂ.ಜಿ.ರಸ್ತೆಯಲ್ಲಿರುವ ಓನೆಕ್ಸ್ ಪಬ್ ಮೇಲೆ ನಿನ್ನೆ ರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಓನೆಕ್ಸ್ ಪಬ್ ವಿರುದ್ಧ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಇನ್ಸ್​ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಓನೆಕ್ಸ್ ಪಬ್ ಅನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಕಾಲ ತೆರೆಯಲಾಗುತ್ತಿದೆ. ಅಗತ್ಯಕ್ಕಿಂತಲೂ ಹೆಚ್ಚಿನ ಶಬ್ದದ ಧ್ವನಿವರ್ಧಕಗಳನ್ನು ಬಳಸಿ ಸುತ್ತಮುತ್ತಲಿನ ಪರಿಸರಕ್ಕೆ ಕಿರಿಕಿರಿ ಉಂಟು ಮಾಡಲಾಗುತ್ತಿದೆ. ಪಬ್​ನಿಂದ ಹೊರ ಬರುವವರು ಸಾರ್ವಜನಿಕರೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿದ್ದು, ಅಕ್ಕಪಕ್ಕದ ನಿವಾಸಿಗಳಿಗೆ, ಸುತ್ತಮುತ್ತ ಓಡಾಡುವ ವಿದ್ಯಾರ್ಥಿಗಳಿಗೆ ಹಾಗೂ ಸಮೀಪದಲ್ಲೇ ಇರುವ ದೇವಸ್ಥಾನಗಳಿಗೆ ಭಕ್ತರು ಹೋಗಿ ಬರುವುದಕ್ಕೆ ತೊಂದರೆಯಾಗುತ್ತಿದೆ ಎಂಬ ದೂರಿನ ಆಧಾರದಲ್ಲಿ ಈ ದಾಳಿ ನಡೆಸಲಾಗಿದೆ.

ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ

ಇನ್ನು ದಾಳಿ ವೇಳೆ ಪೊಲೀಸರು ಧ್ವನಿವರ್ಧಕಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.