ETV Bharat / state

ಮಂಗಳೂರು: ಅಕ್ರಮವಾಗಿ ಪಿಸ್ತೂಲ್​ನೊಂದಿಗೆ ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

author img

By

Published : Jul 29, 2023, 10:32 PM IST

mangaluru
ಅಕ್ರಮವಾಗಿ ಪಿಸ್ತೂಲ್​ನೊಂದಿಗೆ ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು (ದಕ್ಷಿಣ ಕನ್ನಡ): ಅಕ್ರಮವಾಗಿ ಪಿಸ್ತೂಲ್​ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮಿಯಾಪದವು, ಚಿಗುರುಪಾದೆಯ ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್ (61) ಮತ್ತು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆಯ ಯಶವಂತ್ ಕುಮಾರ್ (45) ಬಂಧಿತರು.

ಪಿಸ್ತೂಲ್​ ಹಿಡಿದುಕೊಂಡು ತಿರುಗಾಡುತ್ತಿದ್ದ ಆರೋಪಿಗಳು: ಈ ಇಬ್ಬರು ಆರೋಪಿಗಳು ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಬೈಕ್​ನಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರನ್ನು ಬಂಧಿಸಿದ್ದಾರೆ. ಅವರಿಂದ 1 ಪಿಸ್ತೂಲ್, 2 ಮೊಬೈಲ್ ಫೋನುಗಳು ಹಾಗೂ ಹೀರೋ ಹೊಂಡಾ ಫ್ಯಾಶನ್ ಪ್ಲಸ್ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ರೂ. 1 ಲಕ್ಷದ 45 ಸಾವಿರ ರೂಪಾಯಿ ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಭೂಗತ ಪಾತಕಿ ಛೋಟಾ ಶಕೀಲ್ ಗ್ಯಾಂಗ್​ನ ​​ಶೂಟರ್​ ಬಂಧನ

ವಿವಿಧ ಠಾಣೆಯಲ್ಲಿ ಹಲವು ಕೇಸ್​ ದಾಖಲು: ಆರೋಪಿ ಪೈಕಿ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಯಶವಂತ ಕುಮಾರ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಪ್ರಕರಣ ಹಾಗೂ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿರುತ್ತದೆ.

ಈ ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ, ಎಎಸ್ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು. ಇವರೆಲ್ಲರ ಯಶಸ್ವಿ ಕಾರ್ಯಾಚರಣೆಯಿಂದಾಗಿ ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್ ಮತ್ತು ಯಶವಂತ್ ಕುಮಾರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ದರೋಡೆಕೋರ ಅತೀಕ್ ಅಹ್ಮದ್‌ ಸೋದರ ಮಾವ ಮೊಹಮ್ಮದ್ ಅಹ್ಮದ್‌ ಅರೆಸ್ಟ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.