ETV Bharat / state

ನೇತ್ರಾವತಿ ನೀರುಪಾಲಾದ ಯುವಕನ ಶವ ಕೋಟೆಪುರದಲ್ಲಿ ಪತ್ತೆ

author img

By

Published : Jul 6, 2022, 1:27 PM IST

ನೇತ್ರವಾತಿ ನದಿ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ- ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರದಲ್ಲಿ ಪತ್ತೆಯಾದ ಶವ - ಅಶ್ವಿತ್​ ಮೃತ ಯುವಕ

youth drowned in netravati river
ನೇತ್ರಾವತಿಯಲ್ಲಿ ನೀರುಪಾಲಾದ ಯುವಕನ ಶವ ಕೋಟೆಪುರದಲ್ಲಿ ಪತ್ತೆ

ಉಳ್ಳಾಲ(ದಕ್ಷಿಣ ಕನ್ನಡ): ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾಗಿದ್ದ ಯುವಕ ಅಶ್ವಿತ್(19) ಅವರ ಮೃತದೇಹ ಪತ್ತೆಯಾಗಿದೆ. ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಶವ ಸಿಕ್ಕಿದೆ.

ಸತತ ಮೂರು ದಿನಗಳಿಂದ ಅಶ್ವಿತ್​ಗಾಗಿ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹುಡುಕಾಟ ನಡೆಸಿದ್ದರು ಎಂದು ತಿಳಿದು ಬಂದಿದೆ. ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವಿನ ನಾಮಕರಣ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿತ್​ ಕಾಲೇಜು ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ಈಜಲು ತೆರಳಿದ್ದರು. ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದರು.

ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದರು. ಆದರೇ ಅಶ್ವಿತ್ ಮಾತ್ರ ನೀರಿನಲ್ಲಿ ಕೊಚ್ಚಿ ಹೋಗಿದ್ದರು ಎಂದು ಸ್ನೇಹಿತರು ತಿಳಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಭಾರಿ ಮಳೆ: ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.