ETV Bharat / state

ಗಾಂಜಾ: ಮಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಸೇರಿ ಮೂವರ ಬಂಧನ

author img

By

Published : Jan 12, 2023, 12:21 PM IST

ಪೊಲೀಸರು ಈಗ ಬಂಧಿಸಿರುವ ಮೂವರು, ವಾರದ ಹಿಂದೆ ಬಂಧನವಾಗಿದ್ದ ಪ್ರಮುಖ ಡ್ರಗ್​ ಪೆಡ್ಲರ್​ ನೀಲ್ ಕಿಶೋರ್ ಲಾಲ್ ರಾಮ್ಜಿ ಶಾ ಎಂಬಾತನಿಂದಲೇ ಗಾಂಜಾ ಪಡೆಯುತ್ತಿದ್ದರು ಎಂಬ ವಿಚಾರ ತನಿಖೆಯಿಂದ ಗೊತ್ತಾಗಿದೆ.

Arrested Accused
ಬಂಧಿತ ಆರೋಪಿಗಳು

ಮಂಗಳೂರು: ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳಿದ್ದಾರೆ. ಈ ಮೂಲಕ ಗಾಂಜಾ ಸೇವನೆ ಪ್ರಕರಣದಲ್ಲಿ ಈವರೆಗೆ 13 ಮಂದಿಯನ್ನು ಬಂಧಿಸಿದಂತಾಗಿದೆ.

ಬಂಧಿತರು ಯಾರು? ಎಲ್ಲಿಯವರು?: ವೈದ್ಯಕೀಯ ವಿದ್ಯಾರ್ಥಿಗಳಾದ ಕರಾವಳಿ ಕಾಲೇಜಿನ ಫಾರ್ಮಾ ಡಿ ವಿದ್ಯಾರ್ಥಿ ಕೇರಳದ ಕೊಚ್ಚಿನ್​ನ ಅಡೋನ್ ದೇವ್, ಕೆಎಂಸಿಯ ಅಂತಿಮ ವರ್ಷದ ಪೆಥೊಲಜಿ ಎಂಡಿ ವಿದ್ಯಾರ್ಥಿ ತುಮಕೂರಿನ ಹರ್ಷ ಕುಮಾರ್ ಮತ್ತು ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಮಂಗಳೂರಿನ ಕಸಬ ಬೆಂಗ್ರೆಯ ಮೊಹಮ್ಮದ್ ಅಫ್ರಾರ್ (23) ಬಂಧಿತರು. ಗಾಂಜಾ ಸೇವನೆ ಪ್ರಕರಣದಲ್ಲಿ ಇಬ್ಬರು ವೈದ್ಯರು ಸೇರಿ ಹತ್ತು ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ.

ಮಂಗಳೂರಿನಲ್ಲಿ ವಾಸವಿದ್ದ ಸಾಗರೋತ್ತರ ವಿದ್ಯಾರ್ಥಿ ಯುಕೆಯ ನೀಲ್ ಕಿಶೋರಿಲಾಲ್ ರಾಮ್ಜಿ ಶಾ (38), ಮಂಗಳೂರು ಕೆಎಂಸಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿರುವ ಕೇರಳದ ಡಾ.ಶಮೀರ್ (32), ಕೆಎಂಸಿ ಮಣಿಪಾಲದಲ್ಲಿ ಮೆಡಿಕಲ್ ಸರ್ಜನ್ ಆಗಿರುವ ತಮಿಳುನಾಡಿನ ಡಾ.ಮಣಿಮಾರನ್ ಮುತ್ತು (28), ಕೆಎಂಸಿ ಮಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಕೇರಳದ ಡಾ.ನಾದಿಯಾ ಸಿರಾಜ್ (24), ವಿದ್ಯಾರ್ಥಿನಿ ಆಂಧ್ರಪ್ರದೇಶದ ಡಾ.ವರ್ಷಿಣಿ ಪ್ರತಿ (26), ಕೆಎಂಸಿ ಮಂಗಳೂರಿನ ನಾಲ್ಕನೇ ವರ್ಷದ ಬಿಡಿಎಸ್ ವಿದ್ಯಾರ್ಥಿನಿ ಚಂಢೀಗಡ ಪಂಜಾಬ್​ನ ಡಾ.ರಿಯಾ ಚಡ್ಡ (22), ಕೆಎಂಸಿ ಮಂಗಳೂರಿನ ಮೂರನೇ ವರ್ಷದ ಎಂ.ಎಸ್.ಆರ್ಥೋ ವಿದ್ಯಾರ್ಥಿ ದೆಹಲಿಯ ಡಾ.ಕ್ಷಿತಿಜ್ ಗುಪ್ತ (25), ಕೆಎಂಸಿ ಮಂಗಳೂರಿನ ನಾಲ್ಕನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಪುಣೆಯ ಡಾ.ಇರಾ ಬಾಸಿನ್ (23), ದೇರಳಕಟ್ಟೆ ಯೆನೆಪೊಯ ಆಸ್ಪತ್ರೆಯ ಮೂರನೇ ವರ್ಷದ ಎಂಡಿ ಪಿಸಿಯಾಟ್ರಿಕ್ ವಿದ್ಯಾರ್ಥಿನಿ ಪಂಜಾಬ್ ಚಂಢೀಗಡದ ಡಾ.ಭಾನು ದಾಹಿಯಾ (27) ಬಂಟ್ವಾಳ ತಾಲೂಕಿನ ಮೊಹಮ್ಮದ್ ರೌಫ್ ಯಾನೆ ಗೌಸ್ (34) ಅವರನ್ನು ಬಂಧಿಸಲಾಗಿತ್ತು.

ಜನವರಿ 7ರಂದು ಬಿಡಿಎಸ್ ವಿದ್ಯಾರ್ಥಿ, ಯುಕೆಯ ನೀಲ್ ಕಿಶೋರ್ ಲಾಲ್ ರಾಮ್ಜಿ ಶಾ (38) ಎಂಬಾತನ ಫ್ಲ್ಯಾಟ್​ಗೆ ದಾಳಿ ಮಾಡಿ ಆತನಿಂದ ಎರಡು ಕೆಜಿ ಗಾಂಜಾ, ಆಟಿಕೆ ಪಿಸ್ತೂಲ್, ಎರಡು ಮೊಬೈಲ್ ಫೋನ್ ಮತ್ತು ಡಿಜಿಟಲ್ ತೂಕ‌ ಮಾಪಕ ವಶಪಡಿಸಿಕೊಳ್ಳಲಾಗಿತ್ತು. ಆತನನ್ನು ವಿಚಾರಣೆ ನಡೆಸಿದ ಸಂದರ್ಭದಲ್ಲಿ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಸೇವನೆ ಮತ್ತು ಮಾರಾಟದ ಮಾಹಿತಿ ಸಿಕ್ಕಿದ್ದು, ಪೊಲೀಸರು ದಾಳಿ ನಡೆಸಿ ಮತ್ತೆ 9 ಮಂದಿಯನ್ನು ಬಂಧಿಸಿದ್ದರು.

ಬಂಧಿತ ಒಂಭತ್ತು ಮಂದಿಯಲ್ಲಿ ಇಬ್ಬರು ವೈದ್ಯರಾಗಿದ್ದು, ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದರು. ಇವರಲ್ಲಿ ನಾಲ್ಕು ಮಂದಿ ವಿದ್ಯಾರ್ಥಿನಿಯರಾಗಿದ್ದರು. ಇವರು ಪ್ರಮುಖ ಡ್ರಗ್ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜಿ ಎಂಬಾತನಿಂದ ಗಾಂಜಾ ಪಡೆದು ಸೇವನೆ ಮತ್ತು ಮಾರಾಟ ಮಾಡುತ್ತಿದ್ದರು. ಈತನಿಂದಲೇ ಗಾಂಜಾವನ್ನು ಪಡೆದುಕೊಳ್ಳುತ್ತಿದ್ದ ಮತ್ತೆ ಮೂವರನ್ನು ಇದೀಗ ಬಂಧಿಸಲಾಗಿದೆ ಎಂಬ ಮಾಹಿತಿ ಪೊಲೀಸ್‌ ಮೂಲಗಳಿಂದ ಗೊತ್ತಾಗಿದೆ.

ಇದನ್ನೂ ಓದಿ: ಗಾಂಜಾ ಸೇವನೆ ಮತ್ತು ಮಾರಾಟ.. ಇಬ್ಬರು ವೈದ್ಯರು, ಮಹಿಳಾ ಮೆಡಿಕಲ್​ ವಿದ್ಯಾರ್ಥಿಗಳು ಸೇರಿ 10 ಮಂದಿ ಅರೆಸ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.