ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅವಘಡ
Updated on: Jun 24, 2022, 3:34 PM IST

ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅವಘಡ
Updated on: Jun 24, 2022, 3:34 PM IST
ಮಂಗಳೂರಿನ ನಾಗೊರಿಯಲ್ಲಿ ಪ್ರಶಾಂತ್ ಮಾಲೀಕತ್ವದ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಳಗ್ಗೆ 9ಗಂಟೆಗೆ ಬೆಂಕಿ ಅವಘಡ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬೆಂಕಿಗಾಹುತಿಯಾಗಿವೆ..
ಮಂಗಳೂರು : ನಗರದ ನಾಗೊರಿಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಾಗೂರಿಯ ಪ್ರಶಾಂತ್ ಎಂಬುವರ ಮಾಲೀಕತ್ವದ ಓಕಿನವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್‌ನಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಿಂದ ಶೋರೂಂನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಹಲವು ಸ್ಕೂಟರ್ ಬೆಂಕಿಗಾಹುತಿಯಾಗಿವೆ.
ಬೆಳಗ್ಗೆ 8 ಗಂಟೆಯಿಂದ ಕಟ್ಟಡದಲ್ಲಿ ವಿದ್ಯುತ್ ಏರುಪೇರು ಆಗುತಿತ್ತು. 9ಗಂಟೆಯ ಹೊತ್ತಿಗೆ ಇಲೆಕ್ಟ್ರಿಕ್ ವಾಹನದ ಶೋರೂಂ ಒಳಗಿನಿಂದ ಹೊಗೆ ಬರಲಾರಂಭಿಸಿತ್ತು ಎಂದು ತಿಳಿದು ಬಂದಿದೆ.
ತಕ್ಷಣ ಕಟ್ಟಡದ ಮಾಲೀಕರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲ.
ಇದನ್ನೂ ಓದಿ: ಸಿಸಿಬಿ ಪೊಲೀಸರ ಕಾರ್ಯಾಚರಣೆ: ಇಬ್ಬರು ನೈಜೀರಿಯಾ ಡ್ರಗ್ಸ್ ಪೆಡ್ಲರ್ ಅಂದರ್
