ETV Bharat / state

ಶಿರಾಡಿ ಘಾಟ್​​ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸಂಚಾರಕ್ಕೆ ತಡೆ

author img

By

Published : Feb 5, 2021, 1:00 PM IST

ಮಂಗಳೂರು - ಬೆಂಗಳೂರು ರಾಷ್ಟೀಯ ಹೆದ್ದಾರಿಯ ಶಿರಾಡಿ ಘಾಟ್​ನ ಕೆಂಪುಹೊಳೆ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರ್​ನಿಂದ ಗ್ಯಾಸ್​ ಸೋರಿಕೆಯಾಗುತ್ತಿದೆ.

ಶಿರಾಡಿ ಘಾಟ್​​ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ
Gas tanker overturned at Shiradi Ghat

ಶಿರಾಡಿ: ಮಂಗಳೂರು - ಬೆಂಗಳೂರು ರಾಷ್ಟೀಯ ಹೆದ್ದಾರಿಯ ಶಿರಾಡಿ ಘಾಟ್​ನ ಕೆಂಪುಹೊಳೆ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದ್ದು, ರಸ್ತೆ ಸಂಚಾರಕ್ಕೆ ತಡೆ ಉಂಟಾಗಿದೆ.

ಕೆಂಪುಹೊಳೆ ಸಮೀಪ ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬೆಂಗಳೂರು ಕಡೆಗೆ ಹೊರಟಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಪರಿಣಾಮ ಟ್ಯಾಂಕರ್​​​ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ.

ಸಂಚಾರಕ್ಕೆ ಅಡ್ಡಿ:

ಟ್ಯಾಂಕರ್​ ಪಲ್ಟಿಯಾದ ಪರಿಣಾಮ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತಡೆಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳುವ ವಾಹನಗಳಿಗೆ ಮಾಣಿ - ಮೈಸೂರು ರಸ್ತೆಯಲ್ಲಿ ಸಂಚಾರ ಮಾಡುವಂತೆ ತಿಳಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನೆಟ್​ವರ್ಕ್​​​ ಸಮಸ್ಯೆಯಿಂದಾಗಿ ತೆರವು ಕಾರ್ಯಾಚರಣೆ ವಿಳಂಬವಾಗುತ್ತಿದೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.