ETV Bharat / state

ಭಾರಿ ಮಳೆ - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

author img

By

Published : Jul 26, 2023, 9:48 PM IST

Heavy rain in Dakshina Kannada District
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ

ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡುವ ಮೊದಲೇ ನಕಲಿ ರಜೆ ಘೋಷಣೆ ಆದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜು.27) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಜೆ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಪಿಯು ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಕ ಮಾಡಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಪ್ರವಾಸಿಗರು, ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು, ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077, 0824-2442590 ದೂರವಾಣಿಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

ನಕಲಿ ಆದೇಶ ವೈರಲ್, ಕಾನೂನು ಕ್ರಮ - ಜಿಲ್ಲಾಧಿಕಾರಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡುವ ಮುನ್ನವೆ ರಜೆ ಘೋಷಣೆಯ ನಕಲಿ ಆದೇಶ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರಲ್ಲಿ ಜುಲೈ 27 ರಂದು ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ವೈರಲ್ ಮಾಡಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ನಕಲಿ ಪತ್ರ ವೈರಲ್ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Landslide: ಭಾರಿ ಮಳೆಗೆ ಜೋಯಿಡಾದ ಕ್ಯಾಸಲ್ ರಾಕ್ ಸಮೀಪ ಗುಡ್ಡಕುಸಿತ; ರೈಲು ಸಂಚಾರ ಸ್ಥಗಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.