ETV Bharat / state

ದಕ್ಷಿಣಕನ್ನಡದಲ್ಲಿ ವರುಣನ ಅಬ್ಬರ: ಬೆಳ್ತಂಗಡಿ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ

author img

By

Published : Jul 4, 2022, 8:54 AM IST

Updated : Jul 4, 2022, 10:12 AM IST

heavy-rain-in-dakshina-kannada-district
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ: ಬೆಳ್ತಂಗಡಿ ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ.

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಹವಾಮಾನ ಇಲಾಖೆಯು ಇಂದಿನಿಂದ ಜುಲೈ 7ವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.

heavy-rain-in-dakshina-kannada-district
ತುಂಬಿ ಹರಿಯುತ್ತಿರುವ ನದಿ

ಜೂನ್ 29 ಮತ್ತು 30ರಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಲವೆಡೆ ಜಲಾವೃತವಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ನಿನ್ನೆ ರಾತ್ರಿಯಿಂದ ಮತ್ತೆ ವರುಣನ ಆರ್ಭಟ ಜೋರಾಗಿದೆ. ಜಿಲ್ಲಾಡಳಿತವು ಬೆಳ್ತಂಗಡಿ ಹೊರತುಪಡಿಸಿ ಉಳಿದೆಡೆ ಬೆಳಿಗ್ಗೆ 5ರಿಂದ ಮಳೆ ಕಡಿಮೆ ಆಗುತ್ತಿರುವುದನ್ನು ಅಂದಾಜಿಸಿದೆ. ಆದರೆ ಬೆಳ್ತಂಗಡಿಯಲ್ಲಿ ವರ್ಷಧಾರೆ ಮುಂದುವರೆದಿದ್ದು, ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

heavy-rain-in-dakshina-kannada-district
ಅಣೆಕಟ್ಟಿನಲ್ಲಿ ಸಿಲುಕಿರುವ ಕಸ-ಕಡ್ಡಿಗಳು

ನೀರಿನ ಮಟ್ಟ ಏರಿಕೆ: ಭಾರಿ ಮಳೆಗೆ ಬೆಳ್ತಂಗಡಿ ತಾಲೂಕಿನ ನೇತ್ರಾವತಿ, ಮೃತ್ಯುಂಜಯ ನದಿಗಳ ಹರಿವು ಹೆಚ್ಚಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ತಗ್ಗು ಪ್ರದೇಶಗಳು ಹಾಗೂ ತೋಟಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಕಿಂಡಿ ಅಣೆಕಟ್ಟಿನಲ್ಲಿ ಮರಗಳು, ಕಸ-ಕಡ್ಡಿಗಳು ಸಿಲುಕಿರುವುದರಿಂದ ಸರಾಗವಾಗಿ ನೀರು ಹರಿಯಲು ಅಡಚಣೆಯಾಗುತ್ತಿದೆ.

ಇದನ್ನೂ ಓದಿ: ಕೊಡಗಿನಲ್ಲಿ ಮುಂಗಾರು ಆರ್ಭಟ.. ಕುಸಿಯುತ್ತಿರುವ ಬೆಟ್ಟ-ಗುಡ್ಡ, ಭಾರಿ ಮಳೆಗೆ ಜನ ತತ್ತರ

Last Updated :Jul 4, 2022, 10:12 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.