ETV Bharat / state

ಮಳೆಯಿಂದ ಮನೆ ಕಳೆದುಕೊಂಡವರಿಗೆ ತಕ್ಷಣ ಪರಿಹಾರ: ಸಚಿವ ಆರ್​.ಅಶೋಕ್​

author img

By

Published : Jul 8, 2022, 9:48 AM IST

r ashok immediate relief
ಮಳೆಯಿಂದ ಸೂರು ಕಳೆದುಕೊಂಡವರಿಗೆ ತಕ್ಷಣ ಪರಿಹಾರ

ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಗೆ ಅನೇಕರು ತಮ್ಮ ನಿವಾಸಗಳನ್ನು ಕಳೆದುಕೊಂಡಿದ್ದಾರೆ. ಹೀಗೆ ಸಂತ್ರಸ್ತರಾದವರನ್ನು ಗುರುತಿಸಿ ತಕ್ಷಣ ಪರಿಹಾರ ನೀಡುವಂತೆ ದ.ಕ ಜಿಲ್ಲಾಧಿಕಾರಿಗೆ ಸಚಿವ ಆರ್​.ಅಶೋಕ್​ ಸೂಚನೆ ನೀಡಿದರು.

ಮಂಗಳೂರು: ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳನ್ನು ಗುರುತಿಸಿ ತಕ್ಷಣ ಪರಿಹಾರ ನೀಡುವಂತೆ ಕಂದಾಯ ಸಚಿವ ಆರ್.ಅಶೋಕ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು. ದ.ಕ. ಜಿ.ಪಂನಲ್ಲಿ ಮಳೆ ಹಾನಿಯ ಬಗ್ಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಂಪೂರ್ಣ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ., ಅರ್ಧದಷ್ಟು ಮನೆ ಹಾನಿಗೆ 3 ಲಕ್ಷ ರೂ. ಹಾಗೂ ಭಾಗಶಃ ಮನೆ ಹಾನಿಯಾಗಿದ್ದಲ್ಲಿ 50 ಸಾವಿರ ರೂ. ಪರಿಹಾರವನ್ನು ಎನ್​ಡಿಆರ್​ಎಫ್‌ನಿಂದ ನೀಡಲಾಗುತ್ತದೆ ಎಂದರು.

ಇದೇ ವೇಳೆ, ಮಳೆ ಹಾನಿ ಪರಿಹಾರವನ್ನು ಸ್ವಲ್ಪ ಉದಾರವಾಗಿ ಲೆಕ್ಕಾಚಾರ ಮಾಡಿ ಎಂದು ಡಿಸಿಗೆ ಹೇಳಿದರು. ಸಚಿವರ ಸಭೆಗೆ ಗೈರು ಹಾಜರಾಗಿದ್ದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡುವಂತೆಯೂ ಜಿಲ್ಲಾಧಿಕಾರಿಗೆ ಸೂಚಿಸಿದರು.

ಇದನ್ನೂ ಓದಿ: ಭಾರಿ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.