ETV Bharat / state

ಮಂಗಳೂರು: ಅಪ್ರಾಪ್ತೆ ಮೇಲೆ ಎಸಗಿರುವ ಅತ್ಯಾಚಾರ ಆರೋಪ ಸಾಬೀತು

author img

By

Published : Oct 23, 2021, 11:00 PM IST

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೊ) ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

mangalore court
ಮಂಗಳೂರು ನ್ಯಾಯಾಲಯ

ಮಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಆಕೆ ಮಗುವಿನ ಜನ್ಮಕ್ಕೆ ಕಾರಣನಾದ ವ್ಯಕ್ತಿಯ ಮೇಲಿನ ಅಪರಾಧ ಕೃತ್ಯ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೊ) ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಬೆಳ್ತಂಗಡಿ ತಾಲೂಕಿನ ನೆರಿಯ ನಿವಾಸಿ ಪಿ.ಜೆ. ಜೇಕಬ್ ಯಾನೆ ಚಾಕೋಚ‌ ಅತ್ಯಾಚಾರ ಎಸಗಿದ ಅಪರಾಧಿ. 2015ರ ಫೆಬ್ರವರಿಯಲ್ಲಿ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದಲಿತ ಬಾಲಕಿ ಶಾಲೆಯಿಂದ ಮನೆಗೆ ಹೋಗುತ್ತಿದ್ದಳು. ಈ ವೇಳೆ, ಆರೋಪಿ ಆಕೆಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದನು. ಅಲ್ಲದೇ ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು.

ಇಷ್ಟಕ್ಕೆ ಸುಮ್ಮನಾಗದ ಆರೋಪಿ ಅನೇಕ ಬಾರಿ ಬಾಲಕಿ ಮೇಲೆ ಕೃತ್ಯ ಎಸಗಿದ ಪರಿಣಾಮ ಬಾಲಕಿ ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು, ಡಿಎನ್‌ಎ ಪರೀಕ್ಷೆ ನಡೆಸಿದಾಗ ಜೇಕಬನೇ ಮಗುವಿನ ತಂದೆ ಎಂದು ದೃಢಪಟ್ಟಿತ್ತು. ಈ ಬಗ್ಗೆ ಎಎಸ್‌ಪಿ ರಾಹುಲ್ ಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣವನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೊ) ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ 14 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದರು. ಈ ಮೂಲಕ ಆರೋಪಿ ಮೇಲಿನ ಅಪರಾಧ ಸಾಬೀತಾಗಿರುವುದಾಗಿ ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಸೋಮವಾರ ಪ್ರಕಟಿಸುವ ಸಾಧ್ಯತೆ ಇದೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಪೊಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.