ETV Bharat / state

ಮಂಗಳೂರು ನೈತಿಕ ಪೊಲೀಸ್ ಗಿರಿ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

author img

By

Published : Jul 22, 2023, 4:05 PM IST

Mangalore  Moral policing case
ಬಂಧಿತ ಆರೋಪಿಗಳು

Moral Policing in Mangalore: ಪಣಂಬೂರು ಬೀಚ್​ಗೆ ತೆರಳಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಯುವಕರ ಗುಂಪೊಂದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪ ಪ್ರಕರಣ ನಿನ್ನೆ ನಡೆದಿತ್ತು.

ಮಂಗಳೂರು: ಪಣಂಬೂರು ಬೀಚ್​​ಗೆ ಹೋಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಡಿ ಇಬ್ಬರನ್ನು ಮಂಗಳೂರು ಪೊಲೀಸರು ‌ಬಂಧಿಸಿದ್ದಾರೆ. ಮಂಗಳೂರಿನ‌ ಅಳಪೆ ಮಠದ ಹತ್ತಿರದ ನಿವಾಸಿ ದೀಕ್ಷಿತ್ ಯಾನೆ ದೀಕ್ಷಿತ್ ಅಳಪೆ (32) ಮತ್ತು ಅಳಪೆ ಬಜಾಲ್​ನ ಲಾಯ್ಡ್ ಪಿಂಟೋ (32) ಬಂಧಿತರು.

ಜು.ಲೈ 21 ರಂದು ಮಂಗಳೂರಿನಲ್ಲಿ ಬ್ಯಾಚುಲರ್ ಆಫ್ ಹಾಸ್ಪಿಟಲ್ ಅಡ್ಮಿಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಪಣಂಬೂರು ಬೀಚ್​ಗೆ ಹೋಗಿ ವಾಪಸ್ ಬರುವಾಗ ಅವರನ್ನು ಆರೋಪಿಗಳು ಹಿಂಬಾಲಿಸಿಕೊಂಡು ಬಂದಿದ್ದರು. ಬಿಜೈ ಕಾಪಿಕಾಡ್​ನ 7ನೇ ಕ್ರಾಸ್​ನಲ್ಲಿ ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್ ಫೋನ್​ಗಳನ್ನು ವಶಪಡಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಪಣಂಬೂರು ಬೀಚ್​ಗೆ ತೆರಳಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಯುವಕರ ಗುಂಪೊಂದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪ ಪ್ರಕರಣ ನಿನ್ನೆ ನಡೆದಿತ್ತು. ಮಂಗಳೂರಿನ ಮೆಡಿಕಲ್ ಕಾಲೇಜೊಂದರ 6 ವಿದ್ಯಾರ್ಥಿಗಳು ಶುಕ್ರವಾರ ಸಂಜೆ 5.30ರ ಸುಮಾರಿಗೆ ಪಣಂಬೂರು ಬೀಚ್​ಗೆ ಹೋಗಿದ್ದಾರೆ. ಯುವಕರು ಬೈಕ್​ನಲ್ಲಿ ಬಂದಿದ್ದರೆ, ಯುವತಿಯರು ಬಸ್​ನಲ್ಲಿ ತೆರಳಿದ್ದರು. ಇವರು ಬೀಚ್​ನಲ್ಲಿದ್ದ ವೇಳೆ ಇಬ್ಬರು ಅಪರಿಚಿತರು ಇವರ ಚಲನವಲನಗಳನ್ನು ಗಮನಿಸುತ್ತ, ಮೊಬೈಲ್ ಫೋನ್​ಗಳಲ್ಲಿ ವಿಡಿಯೋ ಮಾಡಿದ್ದರು.

ವಿದ್ಯಾರ್ಥಿಗಳು ಇದನ್ನು ಗಮನಿಸಿದರೂ ಅದನ್ನು ‌ಪ್ರಶ್ನಿಸದೇ ತಮ್ಮ ಪಾಡಿಗೆ ತಾವು ಇದ್ದರು. ನಂತರ ಯುವಕರು ಬೈಕ್​ನಲ್ಲಿ, ಯುವತಿಯರು ಬಸ್​ನಲ್ಲಿ ಹಿಂದಿರುಗಿದ್ದರು. ನಾಲ್ವರು ವಿದ್ಯಾರ್ಥಿನಿಯರ ಪೈಕಿ ಒಬ್ಬ ಯುವತಿ ನಗರದ ಚಿಲಿಂಬಿಯಲ್ಲಿ ಬಸ್​ನಿಂದ ಇಳಿದು ತನ್ನ ಪಿಜಿ ಕಡೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಣಂಬೂರು ಬೀಚ್​ನಲ್ಲಿ ಹಿಂಬಾಲಿಸುತ್ತಿದ್ದ ಅದೇ ಅಪರಿಚಿತರು ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಯುವತಿಗೆ ಬೆದರಿಸಿದ್ದರು. ಅಲ್ಲದೇ 'ಕೇರಳ ಸ್ಟೋರಿ' ನೋಡಿಯೂ ನಿಮಗೆ ಬುದ್ಧಿ ಬರುವುದಿಲ್ವಾ ಎಂದು ಅವಾಚ್ಯ ಪದಗಳಿಂದ ಬೈದು ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಈ ಸಂಬಂಧ ವಿದ್ಯಾರ್ಥಿನಿಯರು ಉರ್ವ ಸ್ಟೋರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ: Moral policing: ಮಂಗಳೂರಲ್ಲಿ ಬೀಚ್​ಗೆ ಹೋಗಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ನೈತಿಕ ಪೊಲೀಸ್ ಗಿರಿ ಆರೋಪ.. ದೂರು ದಾಖಲು

ಮಂಗಳೂರಿನ ಮೂವರಿಗೆ ಗಡಿಪಾರು ನೋಟಿಸ್​: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್​ ನೀಡಲಾಗಿತ್ತು. ನಗರದಲ್ಲಿ ನಡೆದ ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿತ್ತು. ಬಾಲು ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಎಂಬ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿತ್ತು.

ಇದನ್ನೂ ಓದಿ: ನೈತಿಕ ಪೊಲೀಸ್ ಗಿರಿ ಪ್ರಕರಣ: ಮಂಗಳೂರಿನ ಮೂವರಿಗೆ ಗಡಿಪಾರು ನೋಟಿಸ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.