ETV Bharat / state

ಸ್ನಾನದ ವಿಡಿಯೋಗಾಗಿ ಬಾತ್‌ ರೂಂನಲ್ಲಿ ಮೊಬೈಲ್ ಇಟ್ಟ ಆರೋಪ: ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

author img

By

Published : Aug 5, 2023, 11:14 AM IST

Mangaluru police arrest accused
ಬಂಧಿತ ಆರೋಪಿ

ನೆರೆಮನೆ ಯುವತಿಯ ಸ್ನಾನದ ವಿಡಿಯೋ ಮಾಡಲು ಬಚ್ಚಲು ಮನೆಯಲ್ಲಿ ಮೊಬೈಲ್ ಇಟ್ಟ ಆರೋಪದಡಿ ಯುವಕನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಪಕ್ಕದ ಮನೆಯ ಯುವತಿಯ ಸ್ನಾನದ ವಿಡಿಯೋಗಾಗಿ ಬಾತ್‌ ರೂಂನಲ್ಲಿ ಮೊಬೈಲ್ ಇಟ್ಟ ಆರೋಪದಡಿ ಯುವಕನೊಬ್ಬನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಮುಲ್ಕಿಯ ಪಕ್ಷಿಕೆರೆಯ ನಿವಾಸಿ ಸುಮಂತ್ ಪೂಜಾರಿ (22) ಬಂಧಿತ ಯುವಕ. ಆರೋಪಿ ಸುಮಂತ್ ಪೂಜಾರಿ ಪಕ್ಕದ ಮನೆಯ ಬಚ್ಚಲು ಮನೆಯಲ್ಲಿ ಮೊಬೈಲ್ ಇಟ್ಟಿದ್ದ ಎನ್ನಲಾಗಿದೆ. ಈತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಗಳೂರು ನಗರ ಹೊರವಲಯದ ಮುಲ್ಕಿಯ ಪಕ್ಷಿಕರೆಯಲ್ಲಿ ಈ ಘಟನೆ ನಡೆದಿದೆ.

ಪ್ರಕರಣದ ಸಂಪೂರ್ಣ ವಿವರ: ಆರೋಪಿ ಸುಮಂತ್ ಪೂಜಾರಿ ಯುವತಿಯ ಸ್ನಾನದ ವಿಡಿಯೋಗಾಗಿ ಮೊಬೈಲ್ ಇಟ್ಟಿದ್ದನಂತೆ. ಆದರೆ, ಯುವತಿಯ ಬದಲಾಗಿ ಯುವತಿಯ ಅಣ್ಣ ಬಚ್ಚಲು ಮನೆಗೆ ಸ್ನಾನಕ್ಕಾಗಿ ಹೋಗಿದ್ದಾರೆ. ಅಲ್ಲಿ ಮೊಬೈಲ್ ಇರುವುದನ್ನು ಅವರು (ಯುವತಿಯ ಅಣ್ಣ) ಗಮನಿಸಿದ್ದಾರೆ. ಈ ವೇಳೆ, ಸುಮಂತ್ ಯುವತಿಯ ಅಣ್ಣ ಪ್ರಜ್ವಲ್ ಕೈಗೆ ಸಿಕ್ಕಿಬಿದ್ದಿದ್ದಾನೆ. ಸುಮಂತ್ ವಿರುದ್ಧ ಪ್ರಜ್ವಲ್ ಮುಲ್ಕಿ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಪಿಜಿ ಯುವತಿಯರ ಸ್ನಾನದ ವಿಡಿಯೋ ಮಾಡಿ ಸಿಕ್ಕಿಬಿದ್ದ ಬ್ಯಾಂಕ್ ಉದ್ಯೋಗಿ

ಸಿಸಿಬಿ ಕಾರ್ಯಾಚರಣೆ - ಗಾಂಜಾ ಹೊಂದಿದ ವ್ಯಕ್ತಿ ಸೆರೆ: 'ಡ್ರಗ್ಸ್ ಫ್ರಿ ಮಂಗಳೂರು' ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ನಗರದ ಕೋಡಿಕಲ್ ಜೆಎಂ ರಸ್ತೆಯ ಮೊಹಮ್ಮದ್ ಅಝೀಝ್ ಯಾನೆ ಅಜೀಜ್ (40) ಬಂಧಿತ ಆರೋಪಿ.

ಈತ ಮಂಗಳೂರು ನಗರದ ಕಂಕನಾಡಿ - ಪಂಪ್ವೆಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 2 ಕೆ.ಜಿ ತೂಕದ ಅಂದಾಜು 50 ಸಾವಿರ ರೂ. ಮೌಲ್ಯದ ಗಾಂಜಾ, ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್​ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ರೂ 1,05,000 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಪತ್ತೆ ಕಾರ್ಯ ಮುಂದುವರೆದಿದೆ. ಆರೋಪಿಯ ವಿರುದ್ಧ ಈ ಹಿಂದೆ 2022ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿತ್ತು.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐ ರಾಜೇಂದ್ರ ಬಿ, ಸುದೀಪ್ ಎಂ.ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಮಂಗಳೂರು ಸಿಸಿಬಿ ಕಾರ್ಯಾಚರಣೆ: ಎಂಡಿಎಂಎ ಸಿಂಥೆಟಿಕ್ ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರು ಸೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.