ETV Bharat / state

ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ದುಷ್ಕರ್ಮಿಗಳು!

author img

By

Published : Oct 14, 2022, 10:18 AM IST

ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ದುಷ್ಕರ್ಮಿಗಳು
ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ದುಷ್ಕರ್ಮಿಗಳು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರಿಗೆ ದುಷ್ಕರ್ಮಿಗಳು ಅಡ್ಡಗಟ್ಟಿ ತಲ್ವಾರ್ ಝಳಪಳಿಸಿದ ಘಟನೆ ನಡೆದಿದೆ.

ಬಂಟ್ವಾಳ (ದಕ್ಷಿಣ ಕನ್ನಡ): ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರಿಗೆ ದುಷ್ಕರ್ಮಿಗಳು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ, ಬೆಳ್ತಂಗಡಿಗೆ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರು ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿದ್ದರು. ಆಗ ಪಡೀಲ್​​​ನಿಂದ ಕಾರು ಬೆನ್ನಟ್ಟಿದ್ದ ದುಷ್ಕರ್ಮಿಗಳ ತಂಡ, ಫರಂಗಿಪೇಟೆಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ಅವ್ಯಾಚ್ಯವಾಗಿ ಬೈದು ತಲ್ವಾರ್ ಝಳಪಿಸಿ ಪರಾರಿಯಾಗಿದ್ದಾರೆ ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ದುಷ್ಕರ್ಮಿಗಳು
ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ದುಷ್ಕರ್ಮಿಗಳು

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ‌. ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

(ಓದಿ: ಮಂಗಳೂರು: ಪಿಎಫ್ಐ ಸೇರಿದಂತೆ 12 ಕಚೇರಿಗಳಿಗೆ ಬೀಗಮುದ್ರೆ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.